44W ಫ್ಲ್ಯಾಶ್‌ ಚಾರ್ಜರ್‌ನೊಂದಿಗೆ ಸದ್ಯದಲ್ಲೇ ಬರಲಿದೆ Vivo T5 Lite ಮೊಬೈಲ್‌! ನಿರೀಕ್ಷಿತ ಫೀಚರ್ಸ್‌

HIGHLIGHTS

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ ವಿವೋ T5 ಲೈಟ್ ಮೊಬೈಲ್‌

ವಿವೋ T5 ಲೈಟ್ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ

ವಿವೋ T5 ಲೈಟ್ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ನಲ್ಲಿ ಲಗ್ಗೆ ಇಡಲಿದೆ

44W ಫ್ಲ್ಯಾಶ್‌ ಚಾರ್ಜರ್‌ನೊಂದಿಗೆ ಸದ್ಯದಲ್ಲೇ ಬರಲಿದೆ Vivo T5 Lite ಮೊಬೈಲ್‌! ನಿರೀಕ್ಷಿತ ಫೀಚರ್ಸ್‌

ಜನಪ್ರಿಯ ವಿವೋ ಮೊಬೈಲ್ ಸಂಸ್ಥೆಯು ದೇಶೀಯ ಮಾರುಕಟ್ಟೆಗೆ ಹೊಸದಾಗಿ Vivo T5 Lite ಸ್ಮಾರ್ಟ್‌ಫೋನ್ ಅನ್ನು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಹೊಸ ಸ್ಮಾರ್ಟ್‌ಫೋನ್ ಈ ಹಿಂದಿನ ವಿವೋ T4 ಲೈಟ್‌ ಫೋನಿನ ಮುಂದಿನ ಭಾಗವಾಗಿದೆ ಎನ್ನಲಾಗಿದೆ. ಈ ಫೋನ್‌ ಬಿಡುಗಡೆ ಕುರಿತು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಅಂದಹಾಗೆ ಎಂಟ್ರಿ ಕೊಡಲಿರುವ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಅಥವಾ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡುವ ನಿರೀಕ್ಷೆಗಳು ಇವೆ. ಇನ್ನು ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಕನ್ಫರ್ಮ್‌ ಆಗಿದೆ. ಹಾಗಾದರೆ ವಿವೋ T5 ಲೈಟ್ ಮೊಬೈಲ್‌ನ ಲಾಂಚ್‌ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ಲಾಂಚ್‌ ಆಗಲಿದೆ ಹೊಸ Redmi Note 17 ಮೊಬೈಲ್‌ ಸರಣಿ! ನಿರೀಕ್ಷಿತ ಫೀಚರ್ಸ್‌ ಹೀಗಿವೆ

ಸದ್ಯದಲ್ಲೇ Vivo T5 Lite ಬಿಡುಗಡೆ

ವಿವೋ ಮೊಬೈಲ್‌ ಸಂಸ್ಥೆಯ ಹೊಸ ವಿವೋ T5 ಲೈಟ್ ಮೊಬೈಲ್‌ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಿವೋ ಇನ್ನೂ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ಆದರೆ ಫ್ಲಿಪ್‌ಕಾರ್ಟ್ ತಾಣದಲ್ಲಿ ಮೈಕ್ರೋಪೇಜ್‌ ಮೂಲಕ ಫೋನಿನ ವಿನ್ಯಾಸದ ಆರಂಭಿಕ ನೋಟವನ್ನು ನೀಡಿದೆ. ಲೀಕ್ ಮಾಹಿತಿ ಪ್ರಕಾರ ಈ ಮೊಬೈಲ್‌ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.

Vivo T5 Lite Set to Launch in India Soon -Kannada

ವಿವೋ T5 ಲೈಟ್ ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಮುಂಬರುವ ಈ ಫೋನ್‌ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಅಥವಾ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.

ವಿವೋ T5 ಲೈಟ್ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರುವ ಸೂಚನೆಗಳು ಇವೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ನಲ್ಲಿ ಇರಬಹುದು ಹಾಗೆಯೇ ಎರಡನೇ ಕ್ಯಾಮೆರಾವು 2MP ಸೆನ್ಸಾರ್‌ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಇದು 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 44W ಫ್ಲ್ಯಾಶ್‌ ಚಾರ್ಜರ್‌ ಪಡೆದಿರಲಿದೆ. ಇದರೊಂದಿಗೆ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile