ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T5 Pro 5G ಫೋನ್ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!
ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ T5 ಪ್ರೊ 5G ಆಫರ್‌ನಲ್ಲಿ ಲಭ್ಯ
ವಿವೋ T5 ಪ್ರೊ 5G ಮೊಬೈಲ್ 9,020mAh ಬ್ಯಾಟರಿ ಪವರ್ ಪಡೆದಿದೆ
ವಿವೋ T5 ಪ್ರೊ 5G ಫೋನ್ ಸ್ನಾಪ್‌ಡ್ರಾಗನ್ 7s Gen 4 ಪ್ರೊಸೆಸರ್ ಹೊಂದಿದೆ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ ಕಂಪನಿಯ Vivo T5 Pro 5G ಸ್ಮಾರ್ಟ್‌ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 9,020mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T5 ಪ್ರೊ 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಹೊಸ Realme C100i ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯ; ಅಗ್ಗದ ಪ್ರೈಸ್‌ಟ್ಯಾಗ್
Vivo T5 Pro 5G ಮೊಬೈಲ್‌ಗೆ ಬಿಗ್ ಡಿಸ್ಕೌಂಟ್
ಆಕರ್ಷಕ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ವಿವೋ T5 ಪ್ರೊ 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 53,000 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 41,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ವಿವೋ T5 ಪ್ರೊ 5G ಮೊಬೈಲ್ ಫೀಚರ್ಸ್
ಇತ್ತೀಚಿನ ವಿವೋ T5 ಪ್ರೊ 5G ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 5,000 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ವಿವೋ T5 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 9,020mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
