ಚೀನಾ ಮೂಲದ ವಿವೋ ಸ್ಮಾರ್ಟ್‌ಫೋನ್ ಕಂಪನಿಯ Vivo T5 Pro 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 9,020mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T5 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ವಾರ್ಷಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ
ಮೀಡ್‌ರೇಂಜ್ ಬೆಲೆಯಲ್ಲಿ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ವಿವೋ T5 ಪ್ರೊ 5G ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 55,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಈ ಫೋನ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಇತ್ತೀಚಿನ ವಿವೋ T5 ಪ್ರೊ 5G ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 5,000 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ವಿವೋ T5 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 9,020mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.