9,020mAh ಬ್ಯಾಟರಿ ಇರುವ Vivo T5 Pro 5G ಮೊಬೈಲ್ ನಾಳೆ ಖರೀದಿಗೆ ಲಭ್ಯ! ಬೆಲೆ ನೋಡಿ
ನಾಳೆ (ಏಪ್ರಿಲ್ 21 ರಿಂದ) ವಿವೋ T5 ಪ್ರೊ 5G ಖರೀದಿಗೆ ಲಭ್ಯ
ಈ ಹೊಸ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7s Gen 4 ಪ್ರೊಸೆಸರ್ ಹೊಂದಿದೆ
ಈ ನೂತನ ಮೊಬೈಲ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆ ಪಡೆದಿದೆ
ಇತ್ತೀಚಿಗೆ ಹೊಸದಾಗಿ ಬಿಡುಗಡೆ ಆಗಿರುವ Vivo T5 Pro 5G ಸ್ಮಾರ್ಟ್‌ಫೋನ್ ಬಜೆಟ್ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಏಪ್ರಿಲ್ 21 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್ ಶುರು ಮಾಡಲಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 9,020mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 144Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಅಲ್ಲದೇ ಈ ಫೋನ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯೊಂದಿಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ವಿವೋ T5 ಪ್ರೊ 5G ಫೋನಿನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಹೊಸ ಐಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಈ ಜನಪ್ರಿಯ iPhone ಈಗ ಆಫರ್‌ನಲ್ಲಿ ಲಭ್ಯ
Vivo T5 Pro 5G ಸೇಲ್ ಮಾಹಿತಿ
ವಿವೋ T5 ಪ್ರೊ 5G ಸ್ಮಾರ್ಟ್‌ಫೋನ್ ನಾಳೆ (ಏಪ್ರಿಲ್ 21 ರಂದು) ಮಧ್ಯಾಹ್ನ 12 ರಂದು ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 29,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದೆ. ಅದೇ ರೀತಿ 12GB RAM + 256GB ವೇರಿಯಂಟ್ ಬೆಲೆ 39,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ವಿವೋ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ.

ವಿವೋ T5 ಪ್ರೊ 5G ಮೊಬೈಲ್ ಫೀಚರ್ಸ್
ನೂತನ ವಿವೋ T5 ಪ್ರೊ 5G ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 5,000 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ವಿವೋ T5 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 9,020mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile