ಭರ್ಜರಿ ಡಿಸ್ಕೌಂಟ್‌ನಲ್ಲಿ Vivo T5X 5G ಮೊಬೈಲ್ ಖರೀದಿಸಲು ಇದು ಸಕಾಲ!
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T5x 5G ಫೋನಿಗೆ ಬಿಗ್ ಆಫರ್
ವಿವೋ T5x 5G ಫೋನ್ 7,200mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ
ವಿವೋದ ಈ ಫೋನ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯ
ಫ್ಲಿಪ್‌ಕಾರ್ಟ್ ಸಂಸ್ಥೆಯ ಬಹುನಿರೀಕ್ಷಿತ Flipkart Sasa Lele Sale ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಮಾರಾಟದಲ್ಲಿ ಅಗ್ಗದ ಬೆಲೆಯಿಂದ ದುಬಾರಿ ದರದ ಫೋನ್‌ಗಳು ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯವಾಗಲಿವೆ. ಪ್ರಮುಖವಾಗಿ ವಿವೋ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ Vivo T5X 5G ಮೊಬೈಲ್ ಸಹ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 7,200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಹಾಗಾದರೆ ವಿವೋ T5x 5G ಮೊಬೈಲ್‌ನ ಆಫರ್ ಬೆಲೆ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Reliance Jio ಸಂಸ್ಥೆಯ 369 ರೂ.ಗಳ ಪ್ಲಾನಿನಲ್ಲಿ 84 ದಿನಗಳ ವ್ಯಾಲಿಡಿಟಿ ಪಕ್ಕಾ! ಡೇಟಾ ಸಹ ಲಭ್ಯ
Vivo T5X 5G ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್
ಫ್ಲಿಪ್‌ಕಾರ್ಟ್ Sasa Lele ಮಾರಾಟವು ಇದೇ ಮೇ 9 ರಂದು ಪ್ರಾರಂಭ ಆಗಲಿದೆ. ಆದರೆ ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರಿಗೆ ಮೇ 8 ರಂದು ಮಾರಾಟ ತೆರೆಯುತ್ತದೆ. ವಿವೋ T5x 5G ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 28,999 ರೂ.ಗಳು ಆಗಿದ್ದು, ಆದರೆ ಈ ಸೇಲ್‌ನಲ್ಲಿ 21,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಮೊಬೈಲ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ವಿವೋ T5x 5G ಫೀಚರ್ಸ್ ಮಾಹಿತಿ
ನೂತನ ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಹೊಂದಿದ್ದು 2408×1080 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ವಿವೋ T5x 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile