ವಿವೋ ಕಂಪನಿಯ Vivo T5X 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ MediaTek Dimensity 7400 Turbo ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T5x 5G ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಜಸ್ಟ್ 299 ರೂ.ಗಳ ಪ್ಲಾನ್‌ನಲ್ಲಿ ಏನುಂಟು ಏನಿಲ್ಲ ಇಲ್ಲಿದೆ ಮಾಹಿತಿ
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ವಿವೋ T5x 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 28,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಹೊಂದಿದ್ದು 2408×1080 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ವಿವೋ T5x 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.