7,200mAh ಬ್ಯಾಟರಿ ಒಳಗೊಂಡ Vivo T5x 5G ಮೊಬೈಲ್‌ ಖರೀದಿಗೆ ಇದುವೇ ಸಕಾಲ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T5x 5G ಫೋನಿಗೆ ಆಕರ್ಷಕ ಆಫರ್‌

ವಿವೋ T5x 5G ಮೊಬೈಲ್‌ 7,200mAh ಬ್ಯಾಟರಿ ಸೌಲಭ್ಯ ಹೊಂದಿದೆ

ವಿವೋ T5x 5G ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Vivo T5x 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೋ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T5x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಡಿಸ್ಕೌಂಟ್‌ ಬೆಲೆಯಲ್ಲಿ Oppo K14x ಮೊಬೈಲ್‌ ಖರೀದಿ ಮಾಡಲು ಇದು ಸೂಕ್ತ ಸಮಯ!

Vivo T5x 5G ಈಗ ಆಫರ್‌ನಲ್ಲಿ ಲಭ್ಯ

ಬಜೆಟ್‌ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ T5x 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 45,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 27,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ವಿವೋ T5x 5G ಫೀಚರ್ಸ್‌ ಹೀಗಿವೆ

ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಹೊಂದಿದ್ದು 2408×1080 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ವಿವೋ T5x 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :