ಇಂದು Vivo T5X 5G ಮೊಬೈಲ್‌ ಫಸ್ಟ್‌ ಸೇಲ್‌ ಪ್ರಾರಂಭ! 7,200mAh ಬ್ಯಾಟರಿ ಹೈಲೈಟ್

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಇಂದು (ಮಾ.24 ರಂದು) ವಿವೋ T5x 5G ಲಭ್ಯ

ವಿವೋ T5x 5G ಸ್ಮಾರ್ಟ್‌ಫೋನ್‌ 120Hz ವರೆಗೆ ರಿಫ್ರೆಶ್ ರೇಟ್ ಪಡೆದುಕೊಂಡಿದೆ

ಈ ಹೊಸ ಫೋನ್‌ MediaTek Dimensity 7400 Turbo ಪ್ರೊಸೆಸರ್‌ ಅನ್ನು ಹೊಂದಿದೆ

ಇಂದು Vivo T5X 5G ಮೊಬೈಲ್‌ ಫಸ್ಟ್‌ ಸೇಲ್‌ ಪ್ರಾರಂಭ! 7,200mAh ಬ್ಯಾಟರಿ ಹೈಲೈಟ್

ಜನಪ್ರಿಯ ವಿವೋ ಕಂಪನಿಯು ತನ್ನ ಹೊಸ Vivo T5X 5G ಮೊಬೈಲ್‌ ಸೇಲ್‌ ಅನ್ನು ಇಂದು (ಮಾರ್ಚ್ 24 ರಂದು) ಅಧಿಕೃತವಾಗಿ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್‌ 7,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಪವರ್ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ನ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ವಿವೋ T5x 5G ಸ್ಮಾರ್ಟ್‌ಫೋನ್‌ನ ಸೇಲ್‌, ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy F36 5G ಖರೀದಿ ಮಾಡಲು ಇದೇ ಬೆಸ್ಟ್‌ ಚಾನ್ಸ್‌! ಆಫರ್‌ ನೋಡಿ

Vivo T5X 5G ಇಂದಿನಿಂದ ಖರೀದಿಗೆ ಲಭ್ಯ

ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ವಿವೋ T5x 5G ಮೊಬೈಲ್‌ ಬಜೆಟ್‌ ಬೆಲೆಯ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನಿನ ಮೊದಲ ಸೇಲ್‌ ಇಂದು (ಮಾರ್ಚ್ 24 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಅಧಿಕೃತವಾಗಿ ಪ್ರಾರಂಭ ಆಗಲಿದೆ. ಇನ್ನು ಈ ಫೋನಿನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 18,999 ರೂಗಳು ಆಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 20,999 ರೂಗಳು ಆಗಿದೆ. ಅದೇ ರೀತಿ 6GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 22,999 ರೂಗಳು ಆಗಿದೆ. ಇನ್ನು ಈ ಮೊಬೈಲ್‌ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

vivo T5x 5G

ವಿವೋ T5x 5G ಫೋನಿನ ಫೀಚರ್ಸ್‌ ಹೀಗಿವೆ

ಹೊಸ ವಿವೋ T5x 5G ಸ್ಮಾರ್ಟ್‌ಫೋನ್‌ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಹೊಂದಿದ್ದು 2408×1080 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ವಿವೋ T5x 5G ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo