ವಿವೋ ಸಂಸ್ಥೆಯ ಇತ್ತೀಚಿನ Vivo T5X 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಫೋನ್ ನಾಳೆ (ಜುಲೈ 30 ರಂದು) ಭಾರತೀಯ ಮಾರುಕಟ್ಟೆಗೆ ಹೊಸ ಫ್ಯೂಶನ್ ರೆಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 7,200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಪಡೆದಿದೆ. ಹಾಗಾದರೆ ವಿವೋ T5x 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 50MP ಕ್ಯಾಮೆರಾ ಇರುವ Oppo F33 5G ಮೊಬೈಲ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ!
ಈಗಾಗಲೇ ಮಾರುಕಟ್ಟೆ ಗಮನ ಸೆಳೆದಿರುವ ವಿವೋ T5x 5G ಮೊಬೈಲ್ ನಾಳೆ (ಜುಲೈ 30 ರಂದು) ಹೊಸ ಫ್ಯೂಶನ್ ರೆಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂಗಳು ಆಗಿದೆ. ಅಂದಹಾಗೆ ಈ ಫೋನ್ ಈಗಾಗಲೇ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯ ಇದೆ.
ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಹೊಂದಿದ್ದು 2408×1080 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆಸನ್ಸಿಟಿ 7400 ಟರ್ಬೋ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ವಿವೋ T5x 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಎರಡನೇ ಕ್ಯಾಮೆರಾ 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.