7,200mAh ಬ್ಯಾಟರಿ ಇರುವ Vivo T5X 5G ಮೊಬೈಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ!
ಜನಪ್ರಿಯ Vivo ಸ್ಮಾರ್ಟ್‌ಫೋನ್ ಬ್ರಾಂಡ್ ಇತ್ತೀಚಿಗಷ್ಟೆ ನೂತನವಾಗಿ ಬಿಡುಗಡೆ ಮಾಡಿರುವ Vivo T5X 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,200mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T5x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಜೂನ್ 10 ರಂದು Xiaomi 17T ಮೊಬೈಲ್ ಸೇಲ್ ಪ್ರಾರಂಭ! ತ್ರಿವಳಿ ಕ್ಯಾಮೆರಾ ಸೌಲಭ್ಯ
Vivo T5X 5G ಮೊಬೈಲ್ ಬೆಲೆಯಲ್ಲಿ ಇಳಿಕೆ
ಬಜೆಟ್ ದರದ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ವಿವೋ T5x 5G ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 28,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 22,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದು.
ವಿವೋ T5x 5G ಫೀಚರ್ಸ್ ಹೀಗಿವೆ
ಇತ್ತೀಚಿನ ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಹೊಂದಿದ್ದು 2408×1080 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ವಿವೋ T5x 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
