ಮಾರುಕಟ್ಟೆಗೆ ಬಂದೇ ಬಿಡ್ತು Vivo T5X 5G ಸ್ಮಾರ್ಟ್‌ಫೋನ್‌! ಬೆಲೆ ಮತ್ತು ಫೀಚರ್ಸ್‌ ಮಾಹಿತಿ

HIGHLIGHTS

ವಿವೋ T5x 5G ಫೋನ್‌ ಮಾರ್ಚ್‌ 24 ರಿಂದ ಮಾರಾಟ ಪ್ರಾರಂಭ ಮಾಡಲಿದೆ

ವಿವೋ T5x 5G ಮೊಬೈಲ್‌ 32MP ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಪಡೆದುಕೊಂಡಿದೆ

ವಿವೋ T5x 5G ಸ್ಮಾರ್ಟ್‌ಫೋನ್‌ 7,200mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ

ಮಾರುಕಟ್ಟೆಗೆ ಬಂದೇ ಬಿಡ್ತು Vivo T5X 5G ಸ್ಮಾರ್ಟ್‌ಫೋನ್‌! ಬೆಲೆ ಮತ್ತು ಫೀಚರ್ಸ್‌ ಮಾಹಿತಿ

ವಿವೋ ಸಂಸ್ಥೆಯು ತನ್ನ ಹೊಸ Vivo T5X 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಮಾರ್ಚ್ 17 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ 7,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ಹಾಗಾದರೆ ವಿವೋ T5x 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ Samsung Galaxy M17e 5G ಮೊಬೈಲ್‌ ಬಿಡುಗಡೆ! 6,000mAh ಬ್ಯಾಟರಿ ಹೈಲೈಟ್‌

Vivo T5X 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ಮಾರುಕಟ್ಟೆ ಪ್ರವೇಶಿಸಿರುವ ವಿವೋ T5x 5G ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 18,999 ರೂಗಳು ಆಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 20,999 ರೂಗಳು ಆಗಿದೆ. ಅದೇ ರೀತಿ 6GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 22,999 ರೂಗಳು ಆಗಿದೆ. ಅಂದಹಾಗೆ ಈ ಫೋನ್‌ ಇದೇ ಮಾರ್ಚ್ 24 ರಿಂದ ಮಾರಾಟ ಪ್ರಾರಂಭ ಮಾಡಲಿದದೆ. ಇನ್ನು ಈ ಮೊಬೈಲ್‌ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Vivo T5X 5G

ವಿವೋ T5x 5G ಫೀಚರ್ಸ್‌ ಹೀಗಿವೆ

ನೂತನ ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಹೊಂದಿದ್ದು 2408×1080 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ವಿವೋ T5x 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo