ನಾಳೆ Vivo T5x 5G ಮೊಬೈಲ್ ಬಿಡುಗಡೆ! ಸ್ಟೈಲಿಶ್ ಲುಕ್ ಜೊತೆಗೆ ಜಬರ್ದಸ್ತ್ ಫೀಚರ್ಸ್
ವಿವೋ T5x 5G ಮೊಬೈಲ್ ಮಾರ್ಚ್ 17 ರಂದು ಬಿಡುಗಡೆ ಆಗಲಿದೆ
ವಿವೋ ಕಂಪನಿಯ ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಪಡೆದಿರಲಿದೆ
ವಿವೋ T5x 5G ಫೋನ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆ ಒಳಗೊಂಡಿರಲಿದೆ
ವಿವೋ ಕಂಪನಿಯು ಹೊಸದಾಗಿ Vivo T5x 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ತಯಾರಾಗಿದೆ. ಈ ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 17 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಮೊಬೈಲ್ ಕುರಿತಾಗಿ ಈಗಾಗಲೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ಲೈವ್ ಆಗಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಈ ಫೋನ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡಬಹುದು ಎಂದು ಹೇಳಲಾಗಿದೆ. ಇನ್ನುಳಿದಂತೆ ವಿವೋ T5x 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Motorola Edge 60 Fusion 5G ಸ್ಮಾರ್ಟ್‌ಫೋನ್ ಖರೀದಿಸಲು ಇದೇ ಸರಿಯಾದ ಸಮಯ!
Vivo T5x 5G ನಿರೀಕ್ಷಿತ ಬೆಲೆ ಹಾಗೂ ಲಭ್ಯತೆ
ವಿವೋ ಕಂಪನಿಯ ಮುಂಬರುವ ವಿವೋ T5x 5G ಮೊಬೈಲ್ ಈಗಾಗಲೇ ಕುತೂಹಲ ಮೂಡಿಸಿದೆ. ಈ ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 17 ರಂದು) ಭಾರತೀಯ ಮಾರುಕಟ್ಟೆಗೆ ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಹಾಗೆಯೇ ಈ ಮೊಬೈಲ್ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ. ಇನ್ನು ಈ ಫೋನ್ ಸುಮಾರು 25,000 ರೂಗಳ ಪ್ರೈಸ್‌ಟ್ಯಾಗ್‌ನೊಂದಿಗೆ ಎಂಟ್ರಿ ಕೊಡುವ ನಿರೀಕ್ಷೆಗಳಿವೆ. ಈ ಫೋನ್ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಬರುವ ಸೂಚನೆಗಳು ಇವೆ. ಫ್ಲಿಪ್‌ಕಾರ್ಟ್ ಮೈಕ್ರೋಸೈಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಲು ಲಭ್ಯವಿರುತ್ತದೆ ಎಂದು ಖಚಿತಪಡಿಸುತ್ತದೆ.

ವಿವೋ T5x 5G ಮೊಬೈಲ್ ನಿರೀಕ್ಷಿತ ಫೀಚರ್ಸ್
ವಿವೋ ಕಂಪನಿಯ ಹೊಸ ವಿವೋ T5x 5G ಮೊಬೈಲ್ ಪಂಚ್-ಹೋಲ್ ವಿನ್ಯಾಸ ಪಡೆದಿರಲಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.82 ಇಂಚಿನ LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದೆ. ಇನ್ನು ವಿವೋ T5x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ವಿವೋ T5x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿರಲಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರಲಿದ್ದು ಹಾಗೆಯೇ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಸಹ ಪಡೆದಿರಲಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 32MP ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಪಡೆದಿರಲಿದೆ. ಅಲ್ಲದೇ ಈ ಫೋನ್ 7200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿರಲಿದ್ದು ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿರಲಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile