ಸ್ಟೈಲಿಶ್‌ ಡಿಸೈನ್‌ ಇರುವ Vivo T5X ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ! 32MP ಸೆಲ್ಫಿ ಕ್ಯಾಮೆರಾ

HIGHLIGHTS

ಅಮೆಜಾನ್‌ ತಾಣದಲ್ಲಿ ವಿವೋ T5x ಫೋನಿಗೆ ಭಾರೀ ಕೊಡುಗೆ

ವಿವೋ T5x ಮೊಬೈಲ್‌ 7,200mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ

ಈ ಮೊಬೈಲ್‌ ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಕಲರ್‌ನಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo T5X ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ MediaTek Dimensity 7400 Turbo ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T5x ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಭಾರೀ ಆಫರ್‌ನಲ್ಲಿ Samsung Galaxy A36 ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಗಮನಿಸಿ!

Vivo T5X ಫೋನಿಗೆ ಭರ್ಜರಿ ಆಫರ್‌

ಮೀಡ್‌ರೇಂಜ್‌ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ T5x ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 30,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 28,949 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಸೈಬರ್ ಗ್ರೀನ್ ಮತ್ತು ಸ್ಟಾರ್ ಸಿಲ್ವರ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ವಿವೋ T5x ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Vivo t5x 5G

ವಿವೋ T5x ಫೀಚರ್ಸ್‌ ಹೀಗಿವೆ

ವಿವೋ T5x 5G ಮೊಬೈಲ್ 6.76 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಹೊಂದಿದ್ದು 2408×1080 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ವಿವೋ T5x 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 44W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಹೊಂದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :