Vivo V50 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇಳಿಕೆ! 6,000mAh ಬ್ಯಾಟರಿ ಸೌಲಭ್ಯ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ V50 5G ಮೊಬೈಲ್‌ ಫೋನಿಗೆ ಬಿಗ್ ಆಫರ್‌

ವಿವೋ V50 5G ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ರಚನೆ ಒಳಗೊಂಡಿದೆ

ವಿವೋ V50 5G ಫೋನ್ Snapdragon 7 Gen 3 ಪ್ರೊಸೆಸರ್‌ ಪಡೆದಿದೆ

ಫ್ಲಿಪ್‌ಕಾರ್ಟ್‌ ಲೀಡಿಂಗ್‌ ಇ ಕಾಮರ್ಸ್‌ ತಾಣವಾಗಿ ಗುರುತಿಸಿಕೊಂಡಿದ್ದು, ಮೊಬೈಲ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್‌ ನೀಡುತ್ತದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ ಸಂಸ್ಥೆಯ Vivo V50 5G ಮೊಬೈಲ್‌ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ವಿವೋ ಸಂಸ್ಥೆಯ ಈ ಮೊಬೈಲ್‌ Snapdragon 7 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ V50 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಮೇ 6 ರಂದು ದೈತ್ಯ Vivo X300 Ultra ಮೊಬೈಲ್‌ ಬಿಡುಗಡೆ! 200MP ಕ್ಯಾಮೆರಾ ಹೈಲೈಟ್‌

Vivo V50 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

ಜನಪ್ರಿಯ ವಿವೋ V50 5G ಮೊಬೈಲ್‌ ಇದೀಗ Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128 GB ವೇರಿಯಂಟ್‌ 39,999 ರೂಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 32,499 ರೂ.ಗಳ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ರೋಜ ರೆಡ್‌, ಸ್ಟೇರಿ ನೈಟ್‌ ಹಾಗೂ ಟೈಟಾನಿಯಂ ಗ್ರೇ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ವಿವೋ V50 5G ಫೋನಿನ ಪ್ರಮುಖ ಫೀಚರ್ಸ್‌

ವಿವೋ V50 5G ಸ್ಮಾರ್ಟ್‌ಫೋನ್‌ 6.7 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಸೂರ್ಯನ ಬೆಳಕಿನಲ್ಲಿ 4,500 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್‌ ಕ್ವಾಲ್ಕಮ್‌ Snapdragon 7 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 128GB, 256GB ಹಾಗೂ 512GB ಆಂತರೀಕ ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ವಿವೋ V50 5G ಮೊಬೈಲ್‌ ಕ್ಯಾಮೆರಾ ವಿಭಾಗವು ಅತ್ಯುತ್ತಮ ಆಗಿದೆ. ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದ್ದು, ಎರಡನೇ ಕ್ಯಾಮೆರಾವು ಸಹ 50MP ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್‌ 6,000mAh ಬ್ಯಾಟರಿ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :