Vivo V50 5G ಮೊಬೈಲ್ ಈಗ ಕಡಿಮೆ ಬೆಲೆಗೆ ಲಭ್ಯ! ಡ್ಯುಯಲ್ ಕ್ಯಾಮೆರಾ, ಬಿಗ್ ಬ್ಯಾಟರಿ ಫೀಚರ್ಸ್ ಇವೆ
ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ Vivo V50 5G ಆಕರ್ಷಕ ಡಿಸ್ಕೌಂಟ್ ಪಡೆದಿದೆ
Vivo V50 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ
Vivo V50 5G ಮೊಬೈಲ್ Snapdragon 7 Gen 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ
ಪ್ರಸ್ತುತ ಡಿಸ್ಕೌಂಟ್ ಬೆಲೆಯಲ್ಲಿ ನೀವೇನಾದರೂ ಒಂದು ಉತ್ತಮ ಸ್ಮಾರ್ಟ್‌ಫೋನ್ ಖರೀದಿಸಲು ಯೋಚಿಸುತ್ತಿದ್ದರೆ ಇಲ್ಲಿದೆ ನಿಮಗೆ ಅತ್ಯುತ್ತಮ ಆಯ್ಕೆ. Vivo ಮೊಬೈಲ್ ಕಂಪನಿಯ Vivo V50 5G ಸ್ಮಾರ್ಟ್‌ಫೋನ್ ಇದೀಗ Flipkart ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಪ್ಲಾಟ್‌ಫಾರ್ಮ್‌ನಲ್ಲಿ ಆಯ್ದ ಕೆಲವು ಬ್ಯಾಂಕ್ ಕೊಡುಗೆಗಳಿಂದ ಖರೀದಿದಾರರು ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ Snapdragon 7 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಇದು AMOLED ಡಿಸ್‌ಪ್ಲೇ ಪಡೆದಿರುವ ಜೊತೆಗೆ 120Hz ರಿಫ್ರೆಶ್ ರೇಟ್ ಸೌಲಭ್ಯ ಸಹ ಒಳಗೊಂಡಿದೆ. ಹಾಗಾದರೆ Flipkart ವೆಬ್‌ಸೈಟ್‌ನಲ್ಲಿ Vivo V50 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Google Pixel 10a ಬಿಡುಗಡೆಗೆ ಮುಹೂರ್ತ ಫೀಕ್ಸ್! ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್ ಹೀಗಿವೆ
Vivo V50 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ
ಜನಪ್ರಿಯ Vivo V50 5G ಮೊಬೈಲ್ ಸದ್ಯ Flipkart ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB RAM + 128 GB ವೇರಿಯಂಟ್ 39,999 ರೂಗಳ ಪ್ರೈಸ್‌ಟ್ಯಾಗ್ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 32,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಫೋನ್ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಫೋನ್ ರೋಜ ರೆಡ್, ಸ್ಟೇರಿ ನೈಟ್ ಹಾಗೂ ಟೈಟಾನಿಯಂ ಗ್ರೇ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Vivo V50 5G ಮೊಬೈಲ್‌ನ ಪ್ರಮುಖ ಫೀಚರ್ಸ್
Vivo V50 5G ಮೊಬೈಲ್ 6.7 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಸೂರ್ಯನ ಬೆಳಕಿನಲ್ಲಿ 4,500 nits ವರೆಗೆ ಗರಿಷ್ಠ ಬ್ರೈಟ್ನೆಸ್ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ ಕ್ವಾಲ್ಕಮ್ Snapdragon 7 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 128GB, 256GB ಹಾಗೂ 512GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ Vivo V50 5G ಮೊಬೈಲ್ ಕ್ಯಾಮೆರಾ ವಿಭಾಗವು ಅತ್ಯುತ್ತಮ ಆಗಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಸಹ 50MP ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile