ಟ್ರಿಪಲ್‌ ಕ್ಯಾಮೆರಾ ಒಳಗೊಂಡ Vivo V70 ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಈ ಅವಕಾಶ ಬಿಡಬೇಡಿ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ V70 ಫೋನಿಗೆ ಸಖತ್ ಡಿಸ್ಕೌಂಟ್‌

ವಿವೋ V70 ಮೊಬೈಲ್‌ 6,500mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ವಿವೋ V70 ಫೋನ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್‌ ಹೊಂದಿದೆ

ಟ್ರಿಪಲ್‌ ಕ್ಯಾಮೆರಾ ಒಳಗೊಂಡ Vivo V70 ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಈ ಅವಕಾಶ ಬಿಡಬೇಡಿ

ವಿವೋ ಕಂಪನಿಯ Vivo V70 5G ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ V70 ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ Vivo X Fold 6 ಸ್ಮಾರ್ಟ್‌ಫೋನ್‌! ಬೆಲೆ ಹಾಗೂ ಫೀಚರ್ಸ್ ಗಮನಿಸಿ

Vivo V70 5G ಮೊಬೈಲ್‌ಗೆ ಸಖತ್ ಆಫರ್‌

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ವಿವೋ V70 ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ 66,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

vivo v70 5g
vivo v70 5g

ವಿವೋ V70 ಮೊಬೈಲ್‌ ಫೀಚರ್ಸ್‌

ವಿವೋ V70 ಸ್ಮಾರ್ಟ್‌ಫೋನ್‌ 6.59 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ (1.5K ರೆಸಲ್ಯೂಶನ್) ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್‌ 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಅಲ್ಲದೇ OriginOS 6 ಓಎಸ್‌ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ.

ವಿವೋ V70 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು 50MP ಟೆಲಿಫೋಟೋ ಲೆನ್ಸ್ ಮತ್ತು 8MP ಅಲ್ಟ್ರಾ-ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile