vivo v70 5g
ವಿವೋ ಕಂಪನಿಯ Vivo V70 5G ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ V70 ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ Vivo X Fold 6 ಸ್ಮಾರ್ಟ್‌ಫೋನ್! ಬೆಲೆ ಹಾಗೂ ಫೀಚರ್ಸ್ ಗಮನಿಸಿ
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ವಿವೋ V70 ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 66,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ವಿವೋ V70 ಸ್ಮಾರ್ಟ್‌ಫೋನ್ 6.59 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ (1.5K ರೆಸಲ್ಯೂಶನ್) ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ OriginOS 6 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ.
ವಿವೋ V70 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು 50MP ಟೆಲಿಫೋಟೋ ಲೆನ್ಸ್ ಮತ್ತು 8MP ಅಲ್ಟ್ರಾ-ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.