Vivo V70 Elite
ಲೀಡಿಂಗ್ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ ಕಂಪನಿಯ Vivo V70 Elite ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 8s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ V70 ಇಲೈಟ್ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ iQOO Z11 ಮೊಬೈಲ್! 7,050mAh ಬ್ಯಾಟರಿ ಹೈಲೈಟ್
ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ವಿವೋ V70 ಇಲೈಟ್ ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 66,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ವಿವೋ V70 ಇಲೈಟ್ ಮೊಬೈಲ್ 6.59 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 5,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ OriginOS 6 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ವಿವೋ V70 ಇಲೈಟ್ ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾವು ಕ್ರಮವಾಗಿ 50MP ಮತ್ತು 8MP ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.