Flipkart ಆಯೋಜಿಸಿರುವ ವಿಶೇಷ ಸೇಲ್ನಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo V70 Elite ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ Qualcomm Snapdragon 8s Gen 3 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ವಿವೋ V70 ಇಲೈಟ್ ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Airtel ಗ್ರಾಹಕರಿಗೆ ಗುಡ್ನ್ಯೂಸ್! ಯೂಟ್ಯೂಬ್ ಜೊತೆ ಹೊಸ ಪಾಲುದಾರಿಕೆ; ಆಕರ್ಷಕ ಪ್ರಯೋಜನ
ಗ್ರಾಹಕರ ಸ್ನೇಹಿ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ V70 ಇಲೈಟ್ ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 79,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 66,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಪ್ಯಾಶನ್ ರೆಡ್, ಸ್ಯಾಂಡ್ ಬೀಜ್ ಮತ್ತು ಅಥೆಂಟಿಕ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಇತ್ತೀಚಿಗಿನ ವಿವೋ V70 ಇಲೈಟ್ ಮೊಬೈಲ್ 120Hz ರಿಫ್ರೆಶ್ ರೇಟ್ ಬೆಂಬಲದ ಜೊತೆಗೆ 6.59 ಇಂಚಿನ AMOLED ಡಿಸ್ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 5000 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ 2750 x 1260 ಪಿಕ್ಸಲ್ ರೆಸಲ್ಯೂಶನ್ ಅನ್ನು ಹೊಂದಿದೆ. ಅಲ್ಲದೇ ಈ ಫೋನ್ Qualcomm Snapdragon 8s Gen 3 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಹೊಂದಿರುವ ಜೊತೆಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 256GB ಹಾಗೂ 512GB ಸ್ಟೋರೇಜ್ ಆಯ್ಕೆಗಳು ಹೊಂದಿದೆ. ಈ ಮೊಬೈಲ್ 90W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,500 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಪಡೆದುಕೊಂಡಿದೆ.
ಇನ್ನು ವಿವೋ V70 ಇಲೈಟ್ ಮೊಬೈಲ್ ಹಿಂಭಾಗದಲ್ಲಿ ಮೂರು ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು ಇದರ ಮುಖ್ಯ ಕ್ಯಾಮೆರಾವು 50MP ZEISS ಲೆನ್ಸ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಉಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 8MP ಅಲ್ಟ್ರಾ ವೈಲ್ಡ್ ಆಂಗಲ್ ಕ್ಯಾಮೆರಾ ಮತ್ತು 50MP ಟೆಲಿಫೋಟೋ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 50MP Zeiss ಕ್ಯಾಮೆರಾ ಸೆನ್ಸಾರ್ ಅನ್ನು ಇದಗಿಸಲಾಗಿದೆ. ಈ ಪ್ರೀಮಿಯಂ ಮೊಬೈಲ್ ಪ್ಯಾಶನ್ ರೆಡ್, ಸ್ಯಾಂಡ್ ಬೀಜ್ ಮತ್ತು ಅಥೆಂಟಿಕ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.