ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ Vivo V70 FE ಸ್ಮಾರ್ಟ್‌ಫೋನ್‌!

HIGHLIGHTS

ಶೀಘ್ರದಲ್ಲೇ ಭಾರತದಲ್ಲಿ ವಿವೋ V70 FE ಮೊಬೈಲ್‌ ಲಾಂಚ್

ವಿವೋ V70 FE ಮೊಬೈಲ್‌ 200 ಮೆಗಾಪಿಕ್ಸಲ್‌ ಕ್ಯಾಮೆರಾ ಪಡೆದಿರಲಿದೆ

ವಿವೋದ ಈ ನೂತನ ಮೊಬೈಲ್‌ ಎರೆಡು ಕಲರ್‌ ಆಯ್ಕೆಗಳೊಂದಿಗೆ ಲಗ್ಗೆ ಇಡಲಿದೆ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ Vivo V70 FE ಸ್ಮಾರ್ಟ್‌ಫೋನ್‌!

ಜನಪ್ರಿಯ ವಿವೋ ಮೊಬೈಲ್‌ ಕಂಪನಿಯು ತನ್ನ V ಸರಣಿಯಲ್ಲಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ವಿವೋ ಸಂಸ್ಥೆಯು Vivo V70 FE ಅನ್ನು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್‌ ಮಾಡುವ ಬಗ್ಗೆ ಟೀಸ್‌ ಮಾಡಿದೆ. ಅಂದಹಾಗೆ ಇತ್ತೀಚಿಗೆ ಕಂಪನಿಯು ಇಂಡೋನೇಷ್ಯಾದಲ್ಲಿ ವಿವೋ V70 FE ಅನ್ನು ಪರಿಚಯಿಸಿದೆ. ಈ ಫೋನ್‌ ಲಾಂಚ್‌ ಬಗ್ಗೆ ಅಮೆಜಾನ್‌ ತಾಣದಲ್ಲಿ ಮೈಕ್ರೋಸೈಟ್ ಈಗ ಲೈವ್ ಆಗಿದ್ದು ಕೆಲವು ಫೀಚರ್ಸ್‌ಗಳನ್ನು ಬಹಿರಂಗಪಡಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ದೇಶದಲ್ಲಿ ಎರಡು ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಮಾರಾಟ ಆಗಲಿದೆ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ. ಹಾಗಾದರೆ ವಿವೋ V70 FE ಮೊಬೈಲ್‌ನ ಇತರೆ ನಿರೀಕ್ಷಿತ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : ನಾಳೆ Vivo T5X 5G ಫಸ್ಟ್‌ ಸೇಲ್‌ ಪ್ರಾರಂಭ! ಬಜೆಟ್‌ ಬೆಲೆಯಲ್ಲಿ ಆಕರ್ಷಕ ಫೋನ್‌

Vivo V70 FE ಭಾರತದಲ್ಲಿ ಬಿಡುಗಡೆ ಯಾವಾಗ?

ವಿವೋ ಸಂಸ್ಥೆಯ ಮುಂಬರುವ ಹೊಸ ವಿವೋ V70 FE ಫೋನ್‌ ಗ್ರಾಹಕರಲ್ಲಿ ಕುತೂಹಲ ಮೂಡಿಸಿದೆ. ಈ ಮೊಬೈಲ್‌ ಅತೀ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡುಗೆ ಸಾಧ್ಯತೆಗಳು ಇವೆ ಎಂದು ಲೀಕ್ ವರದಿಗಳು ಸೂಚಿಸುತ್ತವೆ. ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ಗಾಗಿ ಮೀಸಲಾದ ಮೈಕ್ರೋಸೈಟ್ ಈಗ ಅಮೆಜಾನ್‌ ತಾಣದಲ್ಲಿ ಲೈವ್ ಆಗಿದೆ. ಹಾಗೆಯೇ ಭಾರತದಲ್ಲಿ ಈ ಫೋನ್‌ ಗ್ರೀನ್‌ ಹಾಗೂ ಪಿಂಕ್ ಕಲರ್‌ ಆಯ್ಕೆಗಳೊಂದಿಗೆ ಲಗ್ಗೆ ಇಡುವ ನಿರೀಕ್ಷೆಗಳಿವೆ. ಇದು 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ. ಹಾಗೆಯೇ ಈ ವೇರಿಯಂಟ್‌ ಸುಮಾರು 35,000 ರೂ.ಗಳ ಪ್ರೈಸ್‌ಟ್ಯಾಗ್‌ನ ಒಳಗೆ ಲಭ್ಯವಾಗುವ ನಿರೀಕ್ಷೆಗಳು ಇವೆ ಎನ್ನಲಾಗಿದೆ.

Vivo V70 FE

ವಿವೋ V70 FE ಫೋನಿನ ನಿರೀಕ್ಷಿತ ಫೀಚರ್ಸ್‌

ಮುಂಬರುವ ಹೊಸ ವಿವೋ V70 FE ಮೊಬೈಲ್‌ 6.83 ಇಂಚಿನ 1.5K Q10+ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಪಡೆದಿರಲಿದ್ದು ಜೊತೆಗೆ 1,900 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಇದರ ಸ್ಕ್ರೀನ್‌ 1,260×2,800 ಪಿಕ್ಸೆಲ್‌ರೆಸಲ್ಯೂಶನ್‌ ಬೆಂಬಲ ಹೊಂದಿರಲಿದೆ. ಅಲ್ಲದೇ ಈ ಮೊಬೈಲ್‌ 8GB + 128GB ಮತ್ತು 12GB + 256GB RAM ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆಗಳನ್ನು ಪಡೆದಿರಲಿದೆ ಎಂದು ಹೇಳಲಾಗುತ್ತದೆ.

ವಿವೋ V70 FE ಮೊಬೈಲ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿರಲಿದೆ. ಇನ್ನು ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಒಳಗೊಂಡಿರುವ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಅನ್ನು ಪಡೆದಿರಲಿದೆ ಎಂದು ಟೀಸ್ ಮಾಡಲಾಗಿದೆ. ಇನ್ನು ಈ ಫೋನ್‌ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿರುವ ಸಾಧ್ಯತೆಗಳು ಇವೆ. ಇದರ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo