ಟ್ರಿಪಲ್‌ ಕ್ಯಾಮೆರಾ ರಚನೆ ಇರುವ Vivo V70 ಖರೀದಿಸಲು ಇದುವೇ ಅತ್ಯುತ್ತಮ ಸಮಯ!

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo V70 ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್‌ 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ V70 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ Samsung Galaxy M07 ಮೊಬೈಲ್‌ಗೆ ಜಬರ್ದಸ್ತ್‌ ಡಿಸ್ಕೌಂಟ್‌!

Vivo V70 ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಪ್ರಿಮಿಯಂ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ V70 ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 53,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 44,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ವಿವೋ V70 ಮೊಬೈಲ್‌ ಫೀಚರ್ಸ್‌

ವಿವೋ V70 ಸ್ಮಾರ್ಟ್‌ಫೋನ್‌ 6.59 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ (1.5K ರೆಸಲ್ಯೂಶನ್) ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್‌ 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB RAM + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಅಲ್ಲದೇ OriginOS 6 ಓಎಸ್‌ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ.

ವಿವೋ V70 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು 50MP ಟೆಲಿಫೋಟೋ ಲೆನ್ಸ್ ಮತ್ತು 8MP ಅಲ್ಟ್ರಾ-ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :