vivo v70 5g
ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ರಿಯಾಯಿತಿ ಪಡೆದಿವೆ. ಅವುಗಳ ಪೈಕಿ ಪ್ರೀಮಿಯಂ ವಿಭಾಗದ Vivo V70 ಮೊಬೈಲ್ ಸಹ ಗಮನಾರ್ಹ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಅಂದಹಾಗೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ವಿವೋ V70 ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
Also Read : ಹೊಸ Vivo S2 ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಲಭ್ಯ; 7,050mAh ಬ್ಯಾಟರಿ ಸೌಲಭ್ಯ
ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ ಮೊಬೈಲ್ ಕಂಪನಿಯ ವಿವೋ V70 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 65,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಅಂದಹಾಗೆ ಈ ಫೋನ್ ಪ್ಯಾಶನ್ ರೆಡ್ ಮತ್ತು ಲೆಮನ್ ಯೆಲ್ಲೋ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ವಿವೋ V70 ಸ್ಮಾರ್ಟ್‌ಫೋನ್ 6.59 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ (1.5K ರೆಸಲ್ಯೂಶನ್) ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ OriginOS 6 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ.
ವಿವೋ V70 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು 50MP ಟೆಲಿಫೋಟೋ ಲೆನ್ಸ್ ಮತ್ತು 8MP ಅಲ್ಟ್ರಾ-ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.
Disclosure: This Article Contains Affiliate Links