ಲೀಡಿಂಗ್ ಇ ಕಾಮರ್ಸ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo V80 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್ಡ್ರಾಗನ್ 7s Gen 4 ಚಿಪ್ಸೆಟ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ವಿವೋ V80 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 80W ಫಾಸ್ಟ್ ಚಾರ್ಜಿಂಗ್ ಇರುವ OnePlus Nord CE6 ಮೊಬೈಲ್ ಇದೀಗ ಡಿಸ್ಕೌಂಟ್ನಲ್ಲಿ ಲಭ್ಯ!
ಪ್ರೀಮಿಯಂ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ V80 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 1,11,990 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ 62,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸ್ಟೆಲ್ಲರ್ ಬ್ಲ್ಯಾಕ್, ಹಾರಿಜಾನ್ ಬ್ಲೂ ಮತ್ತು ಸನ್ರೈಸ್ ಆಂಥೆಮ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ವಿವೋ V80 5G ಸ್ಮಾರ್ಟ್ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ವಿವೋ V80 ಮೊಬೈಲ್ 6.59 ಇಂಚಿನ AMOLED ಡಿಸ್ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 5,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಸ್ನಾಪ್ಡ್ರಾಗನ್ 7 ಜೆನ್ 4 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 8GB + 512GB ವೇರಿಯಂಟ್ಗಳ ಆಯ್ಕೆಗಳನ್ನು ಒಳಗೊಂಡಿದೆ.
ಹಾಗೆಯೇ ವಿವೋ V80 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್ ಜೊತೆಗೆ 90W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
Disclosure: This Article Contains Affiliate Links