ದೇಶೀಯ ಮಾರುಕಟ್ಟೆಗೆ ಸೈಲೆಂಟಾಗಿ ಎಂಟ್ರಿ ಕೊಟ್ಟಿದೆ Vivo V80 5G ಸ್ಮಾರ್ಟ್‌ಫೋನ್; ಜಬರ್ದಸ್ತ್ ಫೀಚರ್ಸ್
ವಿವೋ V80 ಫೋನ್ 7,200mAh ಬ್ಯಾಟರಿ ಹೊಂದಿದೆ
ವಿವೋ V80 ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ
ವಿವೋ V80 5G ಈ ಮೊಬೈಲ್ ಮೂರು ಕಲರ್ ಆಯ್ಕೆ ಒಳಗೊಂಡಿದೆ
ವಿವೋ ಮೊಬೈಲ್ ಸಂಸ್ಥೆಯು ಹೊಸದಾಗಿ Vivo V80 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 144Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಸ್ಟೆಲ್ಲರ್ ಬ್ಲ್ಯಾಕ್, ಹಾರಿಜಾನ್ ಬ್ಲೂ ಹಾಗೂ ಸನ್‌ರೈಸ್ ಆಂಥೆಮ್ ಕಲರ್ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ವಿವೋ V80 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 7,000mAh ಬ್ಯಾಟರಿ ಇರುವ Motorola Edge 70 Fusion ಬೆಲೆಯಲ್ಲಿ ಬೊಂಬಾಟ್ ಇಳಿಕೆ!
Vivo V80 5G ಬೆಲೆ ಹಾಗೂ ಲಭ್ಯತೆ
ವಿವೋ ಮೊಬೈಲ್ ಸಂಸ್ಥೆಯ ವಿವೋ V80 5G ಮೊಬೈಲ್ ಆಕರ್ಷಕ ಡಿಸೈನ್ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 62,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ಬೆಲೆಯು 69,999 ರೂ.ಗಳು ಆಗಿದೆ. ಅದೇ ರೀತಿ 8GB + 512GB ವೇರಿಯಂಟ್ ಬೆಲೆಯು 79,999 ರೂ.ಗಳು ಆಗಿದೆ. ಈ ಫೋನ್ ಸ್ಟೆಲ್ಲರ್ ಬ್ಲ್ಯಾಕ್ (Stellar Black), ಹಾರಿಜಾನ್ ಬ್ಲೂ (Horizon Blue) ಮತ್ತು ಸನ್‌ರೈಸ್ ಆಂಥೆಮ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಕ್ಟೋಬರ್ 13 ರಿಂದ ಫ್ಲಿಪ್‌ಕಾರ್ಟ್ ಹಾಗೂ ವಿವೋ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದೆ.

ವಿವೋ V80 ಮೊಬೈಲ್ ಫೀಚರ್ಸ್
ವಿವೋ V80 ಮೊಬೈಲ್ 6.59 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 5,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 8GB + 512GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ.
ಹಾಗೆಯೇ ವಿವೋ V80 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್ ಜೊತೆಗೆ 90W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
