ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ Vivo X Fold 6 ಸ್ಮಾರ್ಟ್‌ಫೋನ್‌! ಬೆಲೆ ಹಾಗೂ ಫೀಚರ್ಸ್ ಗಮನಿಸಿ

ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ Vivo X Fold 6 ಸ್ಮಾರ್ಟ್‌ಫೋನ್‌! ಬೆಲೆ ಹಾಗೂ ಫೀಚರ್ಸ್ ಗಮನಿಸಿ

ವಿವೋ ಮೊಬೈಲ್‌ ಸಂಸ್ಥೆಯು ಹೊಸದಾಗಿ Vivo X Fold 6 ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 9500 ಸೂಪರ್ ಎಡಿಷನ್ ಪ್ರೊಸೆಸರ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್‌ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 6,900mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 200MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ನೆಬ್ಯುಲಾ ಟೀಲ್ ಮತ್ತು ಪ್ರಿಸ್ಮ್ ಬ್ಲ್ಯಾಕ್ ಕಲರ್‌ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ವಿವೋ X Fold 6 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 7,000mAh ಬ್ಯಾಟರಿ ಇರುವ Motorola Edge 70 Fusion ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

ವಿವೋ ಮೊಬೈಲ್‌ ಸಂಸ್ಥೆಯ ವಿವೋ X Fold 6 ಮೊಬೈಲ್‌ ಆಕರ್ಷಕ ಡಿಸೈನ್‌ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 12GB + 512GB ಸ್ಟೋರೇಜ್‌ ವೇರಿಯಂಟ್‌ ಬೆಲೆ 2,19,999 ರೂ.ಗಳು ಆಗಿದೆ. ಈ ಫೋನ್‌ ನೆಬ್ಯುಲಾ ಟೀಲ್ ಮತ್ತು ಪ್ರಿಸ್ಮ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಕ್ಟೋಬರ್ 13 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್ ಹಾಗೂ ವಿವೋ ವೆಬ್‌ಸೈಟ್‌ ಮೂಲಕ ಮಾರಾಟಕ್ಕೆ ಬರಲಿದೆ.

ವಿವೋ X Fold 6 ಮೊಬೈಲ್‌ ಫೀಚರ್ಸ್‌

ವಿವೋ X Fold 6 ಮೊಬೈಲ್‌ 6.83 ಇಂಚಿನ 8.02 ಇಂಚಿನ ಮಡಚಬಹುದಾದ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 2000 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 9500 ಸೂಪರ್ ಎಡಿಷನ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ.

ಹಾಗೆಯೇ ವಿವೋ X Fold 6 ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,900mAh ಬ್ಯಾಟರಿ ಸಪೋರ್ಟ್‌ ಜೊತೆಗೆ 80W ವೈರ್ಡ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile