ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್ ಘೋಷಿಸುತ್ತವೆ. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ ಬ್ರಾಂಡ್‌ನ Vivo X200 ಸ್ಮಾರ್ಟ್‌ಫೋನ್ ಗಮನಾರ್ಹ ಡಿಸ್ಕೌಂಟ್ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ವಿವೋ X200 ಮೊಬೈಲ್ 5,800mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ Mediatek Dimensity 9400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಗ್ರಾಹಕರು ಈ ಫೋನ್ ಅನ್ನು ನ್ಯಾಚುರಲ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದು. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ X200 ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ Vivo X300s ! ಗಮನ ಸೆಳೆವ ಕ್ಯಾಮೆರಾ ಸೌಲಭ್ಯ
ಜನಪ್ರಿಯ ವಿವೋ X200 ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ವೇರಿಯಂಟ್ ಬೆಲೆ 74,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 61,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಗ್ರಾಹಕರು ಈ ಮೊಬೈಲ್ ಅನ್ನು ನ್ಯಾಚುರಲ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದು.
ವಿವೋ X200 ಮೊಬೈಲ್ 6.67 ಇಂಚಿನ HDR10+ ಬೆಂಬಲಿತ AMOLED ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದ್ದು 4,500 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ Mediatek Dimensity 9400 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 12GB RAM + 256GB ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5,800mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 90W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.
ಹಾಗೆಯೇ ವಿವೋ X200 ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನೆರಡು ಕ್ಯಾಮೆರಾಗಳು ಕ್ರಮವಾಗಿ 50MP ಹಾಗೂ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.