ದೈತ್ಯ Vivo X200T ಸ್ಮಾರ್ಟ್‌ಫೋನ್‌ ಈಗ ಭಾರೀ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ X200T ಈಗ ಬಿಗ್ ಆಫರ್‌ನಲ್ಲಿ ಲಭ್ಯ

ವಿವೋ X200T ಫೋನ್‌ ಟ್ರಿಪಲ್‌ 50MP ಸೆನ್ಸಾರ್‌ ಕ್ಯಾಮೆರಾ ರಚನೆ ಪಡೆದಿದೆ

ವಿವೋ X200T ಮೊಬೈಲ್ Seaside Lilac ಮತ್ತು Stellar Black ಬಣ್ಣಗಳ ಆಯ್ಕೆ ಹೊಂದಿದೆ

ವಿವೋ ಮೊಬೈಲ್‌ ಕಂಪನಿಯ ದೈತ್ಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ Vivo X200T ಮೊಬೈಲ್ ಫಾಸ್ಟ್‌ ಚಾರ್ಜರ್‌ ಹಾಗೂ ಅತ್ಯುತ್ತಮ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ MediaTek Dimensity 9400+ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ವಿವೋ X200T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Samsung Galaxy M47 5G ಮೊಬೈಲ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌! ಟ್ರಿಪಲ್‌ ಕ್ಯಾಮೆರಾ ಸೌಲಭ್ಯ

Vivo X200T ಬೆಲೆಯಲ್ಲಿ ಗಮನಾರ್ಹ ಇಳಿಕೆ

ಬೊಂಬಾಟ್‌ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ವಿವೋ ಮೊಬೈಲ್‌ ಕಂಪನಿಯ ವಿವೋ X200T ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ವಿವೋ X200T ಫೋನ್‌ ಫೀಚರ್ಸ್‌ ಮಾಹಿತಿ

ವಿವೋ X200T ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ MediaTek Dimensity 9400+ ಚಿಪ್‌ಸೆಟ್‌ ಪ್ರೊಸೆಸರ್‌ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ X200T ಹಿಂಭಾಗದಲ್ಲಿ ಟ್ರಿಪಲ್‌ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿವೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :