512GB ಸ್ಟೋರೇಜ್ ಇರುವ Vivo X200T ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

HIGHLIGHTS

ವಿವೋ X200T ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿಯಲ್ಲಿ ಲಭ್ಯ

ಈ ಮೊಬೈಲ್‌ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ವಿವೋ X200T ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400+ ಪ್ರೊಸೆಸರ್‌ ಹೊಂದಿದೆ

512GB ಸ್ಟೋರೇಜ್ ಇರುವ Vivo X200T ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

ವಿವೋ ಮೊಬೈಲ್‌ ಕಂಪನಿಯ Vivo X200T ಮೊಬೈಲ್‌ ಪ್ರೀಮಿಯಂ ಹಾಗೂ ವೇಗದ ಪ್ರೊಸೆಸರ್‌ ಆಯ್ಕೆಯ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400+ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಸೀಸೈಡ್‌ ಲೀಲಾಕ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ X200T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅತ್ಯುತ್ತಮ ಫೀಚರ್ಸ್‌ ಒಳಗೊಂಡ Motorola Signature ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Vivo X200T ಬೆಲೆಯಲ್ಲಿ ಭಾರೀ ಇಳಿಕೆ

ಪ್ರೀಮಿಯಂ ಬೆಲೆಯ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ವಿವೋ X200T ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 512GB ಸ್ಟೋರೇಜ್ ವೇರಿಯಂಟ್‌ ಬೆಲೆ 87,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 69,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಸೀಸೈಡ್‌ ಲೀಲಾಕ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

vivo X200T
vivo X200T

ವಿವೋ X200T ಫೋನ್‌ ಫೀಚರ್ಸ್‌ ಮಾಹಿತಿ

ವಿವೋ X200T ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400+ ಚಿಪ್‌ಸೆಟ್‌ ಪ್ರೊಸೆಸರ್‌ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ X200T ಹಿಂಭಾಗದಲ್ಲಿ ಟ್ರಿಪಲ್‌ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿವೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಸೀಸೈಡ್‌ ಲೀಲಾಕ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile