Vivo X200T ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ! ಈ ಚಾನ್ಸ್‌ ಕಳ್ಕೋಬೇಡಿ

HIGHLIGHTS

ವಿವೋ X200T ಮೊಬೈಲ್‌ ಬೆಲೆಯಲ್ಲಿ ಈಗ ಸಖತ್ ಇಳಿಕೆ

ಈ ಸ್ಮಾರ್ಟ್‌ಫೋನ್‌ 6,200mAh ಬ್ಯಾಟರಿ ಸಪೋರ್ಟ್‌ ಹೊಂದಿದೆ

ಈ ಮೊಬೈಲ್‌ MediaTek Dimensity 9400+ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ

ಪ್ರೀಮಿಯಂ ಮಾದರಿಯ Vivo X200T ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಚಾನ್ಸ್‌ ಇದೆ. ಕಂಪನಿಯ ಈ ಮೊಬೈಲ್‌ MediaTek Dimensity 9400+ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ X200T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Oppo K14x 5G ಮೊಬೈಲ್‌ ಖರೀದಿ ಮಾಡಲು ಇದುವೇ ಸರಿಯಾದ ಸಮಯ! ಬೆಲೆಯಲ್ಲಿ ಇಳಿಕೆ

Vivo X200T ಬೆಲೆಯಲ್ಲಿ ಗಮನಾರ್ಹ ಇಳಿಕೆ

ವಿವೋ X200T ಮೊಬೈಲ್‌ ಬಜೆಟ್‌ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 59,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ Seaside Lilac ಮತ್ತು Stellar Black ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ.

ವಿವೋ X200T ಫೀಚರ್ಸ್‌ ಮಾಹಿತಿ

ವಿವೋ X200T ಫೋನ್ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ MediaTek Dimensity 9400+ ಚಿಪ್‌ಸೆಟ್‌ ಪ್ರೊಸೆಸರ್‌ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಮೊಬೈಲ್‌ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ X200T ಹಿಂಭಾಗದಲ್ಲಿ ಟ್ರಿಪಲ್‌ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ ಸೋನಿಯ IMX921 ಸೆನ್ಸಾರ್‌ ಮತ್ತು ವಿವೋದ ಬಯೋನಿಕ್ ಸ್ಪೆಕ್ಟ್ರಮ್ ಟೆಕ್ನಾಲಜಿ 2.0 ಆಯ್ಕೆಯನ್ನು ಪಡೆದುಕೊಂಡಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :