Vivo X200T ಭಾರತದಲ್ಲಿ ಬಿಡುಗಡೆಯಾಗಿದೆ! ಜಬರ್ದಸ್ತ್‌ ಫೀಚರ್ಸ್‌ ಇರುವ ಈ ಫೋನ್‌ ಬೆಲೆ ಎಷ್ಟು?

Updated on 27-Jan-2026
HIGHLIGHTS

ಭಾರತದ ಮಾರುಕಟ್ಟೆಗೆ Vivo X200T ಫೋನ್‌ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ

Vivo X200T ಫೋನ್‌ ಟ್ರಿಪಲ್‌ Zeiss ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ

Vivo X200T ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 59,999 ರೂಗಳು ಆಗಿದೆ

ಲೀಡಿಂಗ್ ಮೊಬೈಲ್‌ ಬ್ರ್ಯಾಂಡ್‌ಗಳ ಪೈಕಿ ಒಂದಾದ Vivo ಕಂಪನಿಯ ಬಹುನಿರೀಕ್ಷಿತ Vivo X200T ಸ್ಮಾರ್ಟ್‌ಫೋನ್‌ ಇದೀಗ ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಆಗಿದೆ. ನಿರೀಕ್ಷೆಯಂತೆ ನೂತನ Vivo X200T ಮೊಬೈಲ್‌ MediaTek Dimensity 9400+ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ Zeiss ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು ಎರಡು ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಇದು ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿರುವುದು ಫೋನಿನ ಪ್ರಮುಖ ಕೀ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಹಾಗಾದರೇ Vivo X200T ಮೊಬೈಲ್‌ನ ಬೆಲೆ ಎಷ್ಟು, ಫೀಚರ್ಸ್‌ಗಳೇನು ಎಂದು ಮುಂದೆ ನೋಡೋಣ.

Also Read : ಭಾರತದಲ್ಲಿ iQOO 15 ಬಿಡುಗಡೆಗೆ ಮುಹೂರ್ತ ಫಿಕ್ಸ್‌! ಬೆಲೆ ಮತ್ತು ಫೀಚರ್ಸ್ ಮಾಹಿತಿ ಇಲ್ಲಿದೆ

Vivo X200T ಮೊಬೈಲ್‌ನ ಬೆಲೆ ಮತ್ತು ಲಭ್ಯತೆಯ ಮಾಹಿತಿ

ಭಾರತದಲ್ಲಿ Vivo X200T ಫೋನಿನ 12GB RAM + 256GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 59,999 ಆಗಿದ್ದರೆ ಇದರ 12GB RAM + 512GB ಸ್ಟೋರೇಜ್ ಹೊಂದಿರುವ ವೇರಿಯಂಟ್‌ ಬೆಲೆ ರೂ. 69,999 ಆಗಿದೆ. ಇನ್ನು ಆಸಕ್ತ ಗ್ರಾಹಕರು Axis, HDFC and SBI ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 5,000 ರೂ.ಗಳ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಇನ್ನು ಇದು Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಲಭ್ಯ. ಈ ಫೋನ್‌ ಅನ್ನು ಗ್ರಾಹಕರು ಇದೇ ಫೆಬ್ರವರಿ 3 ರಿಂದ ಅಧಿಕೃತ Vivo ವೆಬ್‌ಸೈಟ್‌, Flipkart ಮತ್ತು ದೇಶಾದ್ಯಂತದ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದು.

Vivo X200T ಫೋನಿನ ಫೀಚರ್ ಮತ್ತು ಇತರೆ ಆಯ್ಕೆಗಳು

ಹೊಸ Vivo X200T ಫೋನ್ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ MediaTek Dimensity 9400+ ಚಿಪ್‌ಸೆಟ್‌ ಪ್ರೊಸೆಸರ್‌ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.

Vivo X200T ಹಿಂಬದಿಯಲ್ಲಿ ಟ್ರಿಪಲ್‌ Zeiss ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿವೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ ಸೋನಿಯ IMX921 ಸೆನ್ಸಾರ್‌ ಮತ್ತು ವಿವೋದ ಬಯೋನಿಕ್ ಸ್ಪೆಕ್ಟ್ರಮ್ ಟೆಕ್ನಾಲಜಿ 2.0 ಆಯ್ಕೆಯನ್ನು ಪಡೆದುಕೊಂಡಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :