ಜನಪ್ರಿಯ Vivo X200T ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಬೆಸ್ಟ್ ಟೈಮ್!
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ X200T ಈಗ ಆಫರ್‌ನಲ್ಲಿ ಲಭ್ಯ
ವಿವೋ X200T ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ
ವಿವೋ ಈ ಮೊಬೈಲ್ 6,200mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ವಿವೋ ಮೊಬೈಲ್ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ Vivo X200T ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ MediaTek Dimensity 9400+ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಸಿಲ್ವರ್ ಆಶ್, ಮಿರಾಜ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ X200T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vi ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ವಾರ್ಷಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ
Vivo X200T ಈಗ ಭರ್ಜರಿ ಆಫರ್‌ನಲ್ಲಿ ಲಭ್ಯ
ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ವಿವೋ X200T ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 79,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಸಿಲ್ವರ್ ಆಶ್, ಮಿರಾಜ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ವಿವೋ X200T ಫೋನ್ ಫೀಚರ್ಸ್ ಮಾಹಿತಿ
ವಿವೋ X200T ಸ್ಮಾರ್ಟ್‌ಫೋನ್ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್ ಪಡೆದುಕೊಂಡಿದೆ. ಇನ್ನು ಈ ಫೋನ್ MediaTek Dimensity 9400+ ಚಿಪ್‌ಸೆಟ್ ಪ್ರೊಸೆಸರ್ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.
ವಿವೋ X200T ಹಿಂಭಾಗದಲ್ಲಿ ಟ್ರಿಪಲ್ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್ ಸೌಲಭ್ಯ ಪಡೆದುಕೊಂಡಿವೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ Seaside Lilac ಮತ್ತು Stellar Black ಕಲರ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
