vivo X200T launched with stunning features and best offers in India
Vivo ಮೊಬೈಲ್‌ಗಳ ಲಿಸ್ಟ್‌ಗೆ ಕಳೆದ ವಾರವಷ್ಟೇ ಸೇರ್ಪಡೆ ಆಗಿರುವ ಹೊಸ Vivo X200T ಇಂದಿನಿಂದ (ಫೆಬ್ರವರಿ 3 ರಿಂದ) ಭಾರತದಲ್ಲಿ ಮಾರಾಟ ಪ್ರಾರಂಭಿಸಿದೆ. ಈ ಫೋನ್ Zeiss ಲೆನ್ಸ್ ಜೊತೆಗೆ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಆಗಿದ್ದು ಇದರೊಂದಿಗೆ MediaTek Dimensity 9400+ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಲ್ಲದೇ 6,200mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಈ ಫೋನಿನ ಪ್ರಮುಖ ಹೈಲೈಟ್ ಅಂಶಗಳಲ್ಲಿ ಒಂದಾಗಿದೆ. ಹಾಗಾದರೆ Vivo X200T ಫೋನಿನ ಬೆಲೆ ಎಷ್ಟು, ಎಲ್ಲಿ ಖರೀದಿಸಬೇಕು ಹಾಗೂ ಫೀಚರ್ಸ್ ಏನು ಎನ್ನುವ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : BSNL ನ ಈ ವಾರ್ಷಿಕ ವ್ಯಾಲಿಡಿಟಿ ಪ್ಲಾನಿನಲ್ಲಿ ಉಚಿತ ವಾಯ್ಸ್ ಕರೆ ಜೊತೆಗೆ ಪ್ರತಿದಿನ 3GB ಡೇಟಾ ಪ್ರಯೋಜನ
ದೇಶಿಯ ಮಾರುಕಟ್ಟೆಯಲ್ಲಿ Vivo X200T ಫೋನಿನ 12GB RAM + 256GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 59,999 ಆಗಿದ್ದರೆ ಇದರ 12GB RAM + 512GB ಸ್ಟೋರೇಜ್ ಹೊಂದಿರುವ ವೇರಿಯಂಟ್ ಬೆಲೆ ರೂ. 69,999 ಆಗಿದೆ. ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕೂಡುಗೆ ಮೂಲಕ 5,000 ರೂ.ಗಳ ಇನ್‌ಸ್ಟಂಟ್ ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಇದು Seaside Lilac ಮತ್ತು Stellar Black ಕಲರ್ ಆಯ್ಕೆಯಲ್ಲಿ ಲಭ್ಯ. ಈ ಫೋನ್ ಅನ್ನು ಗ್ರಾಹಕರು ಇದೇ ಫೆಬ್ರವರಿ 3 ರಿಂದ ಅಧಿಕೃತ Vivo ಇ – ಸ್ಟೋರ್, Flipkart ಮತ್ತು ದೇಶಾದ್ಯಂತದ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದು.
ನೂತನ Vivo X200T ಫೋನ್ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್ ಪಡೆದುಕೊಂಡಿದೆ. ಇನ್ನು ಈ ಫೋನ್ MediaTek Dimensity 9400+ ಚಿಪ್‌ಸೆಟ್ ಪ್ರೊಸೆಸರ್ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಮೊಬೈಲ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.
Vivo X200T ಹಿಂಬದಿಯಲ್ಲಿ ಟ್ರಿಪಲ್ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್ ಸೌಲಭ್ಯ ಪಡೆದುಕೊಂಡಿವೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ ಸೋನಿಯ IMX921 ಸೆನ್ಸಾರ್ ಮತ್ತು ವಿವೋದ ಬಯೋನಿಕ್ ಸ್ಪೆಕ್ಟ್ರಮ್ ಟೆಕ್ನಾಲಜಿ 2.0 ಆಯ್ಕೆಯನ್ನು ಪಡೆದುಕೊಂಡಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ Seaside Lilac ಮತ್ತು Stellar Black ಕಲರ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.