Vivo X300 Pro and X300 launched in India with 200MP Camera Check price specs features here
ವಿವೋ ಸ್ಮಾರ್ಟ್‌ಫೋನ್ ಬ್ರಾಂಡ್ ಭಾರತದಲ್ಲಿ ತನ್ನ ಹೊಸ Vivo X300 Series 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ವಿವೋ ಈ ಸರಣಿಯಲ್ಲಿ ಎರಡು ಪವರ್ಫುಲ್ ಮತ್ತು ಇಂಟ್ರೆಸ್ಟಿಂಗ್ ಪ್ರೀಮಿಯಂ ಫೀಚರ್ಗಳೊಂದಿಗೆ Vivo X300 5G ಮತ್ತು Vivo X300 Pro 5G ಎಂಬ ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಈ ಲೇಖನದಲ್ಲಿ Vivo X300 5G ಸ್ಮಾರ್ಟ್‌ಫೋನ್ ಬಗ್ಗೆ ಮಾತ್ರ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಈ ಸ್ಮಾರ್ಟ್ಫೋನ್ 200MP ZEISS APO Telephoto ಕ್ಯಾಮೆರಾ ಮತ್ತು 6040mAh ಬ್ಯಾಟರಿಯೊಂದಿಗೆ ಲಾಂಚ್ ಮತ್ತು ಟೆಲಿಕಾಂ ಆಫರ್ಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿದೆ. ಹಾಗಾದ್ರೆ ಇದರ ಫೀಚರ್ ಮತ್ತು ವಿಶೇಷಣೆಗಳೇನು ಮತ್ತು ಇದರ ಆಫರ್ ಬೆಲೆ ಎಷ್ಟು ಎಲ್ಲವನ್ನು ಈ ಕೆಳಗೆ ತಿಳಿಯಬಹುದು.
Also Read: Sanchar Saathi App: ಪ್ರತಿಯೊಂದು ಸ್ಮಾರ್ಟ್‌ಫೋನ್‌ನಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಯಾಕೆ ಕಡ್ಡಾಯ?
Vivo X300 Series 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹75,999 ರೂಗಳಿಗೆ ಮತ್ತು ಇದರ ಮತ್ತೊಂದು 12GB RAM ಮತ್ತು 512GB ಸ್ಟೋರೇಜ್ ರೂಪಾಂತರವನ್ನು ₹81,999 ರೂಗಳಿಗೆ ಮತ್ತು ಕೊನೆಯದಾಗಿ ಇದರ 16GB RAM ಮತ್ತು 512GB ಸ್ಟೋರೇಜ್ ರೂಪಾಂತರವನ್ನು ₹85,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡ್ ಬಳಸಿಕೊಂಡು ಸುಮಾರು 10% ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ ಇದೆ 10ನೇ ಡಿಸೆಂಬರ್ 2025 ರಿಂದ ಮೊದಲ ಮಾರಾಟದಲ್ಲಿ ಖರೀದಿಸಬಹುದು.
Vivo X300 5G ಸ್ಮಾರ್ಟ್ಫೋನ್ 6.31 ಇಂಚಿನ AMOLED ಡಿಸ್ಪ್ಲೇಯೊಂದಿಗೆ 2640 × 1216 ಪಿಕ್ಸೆಲ್‌ಗಳ ರೆಸಲ್ಯೂಶನ್ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಹೊಂದಿದೆ. OPPO Reno 14 5G ಫೋನ್ ಕಾಮೆರದಲ್ಲಿ 200MP ಸೋನಿ LYT 828 ಸೆನ್ಸರ್ ಮತ್ತು 50MP ವೈಡ್ ಅಂಗಲ್ ಮತ್ತೊಂದು 50MP ಟೆಲಿಫೋಟೋ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 50MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
Vivo X300 5G ಫೋನ್ MediaTek Dimensity 9500 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 16 ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, eSIM Support, AGPS/GPS, GLONASS, BDS, Galileo, 3D Ultrasonic single-point fingerprint ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Vivo X300 5G ಸ್ಮಾರ್ಟ್ಫೋನ್ 6040mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ 5 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 7 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.