ಶೀಘ್ರದಲ್ಲೇ Vivo X300 FE ಲಾಂಚ್! 50MP ಕ್ಯಾಮೆರಾ, 12GB RAM ಜೊತೆಗೆ ಬಿಗ್‌ ಬ್ಯಾಟರಿ ಸಾಧ್ಯತೆ

Updated on 17-Feb-2026
HIGHLIGHTS

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ Vivo X300 FE ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಲಾಂಚ್‌ ಆಗುವ ನಿರೀಕ್ಷೆ

ಮುಂಬರುವ ಈ ಮೊಬೈಲ್ 40W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಹೊಂದಿರಬಹುದು

ಚೀನಾ ಮೂಲದ Vivo ಮೊಬೈಲ್‌ ಕಂಪನಿಯು ಭಿನ್ನ ಪ್ರೈಸ್‌ಟ್ಯಾಗ್‌ನ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇದೀಗ ವಿವೋ ಕಂಪನಿಯು ತನ್ನ ವಿವೋ X300 ಶ್ರೇನಿಯಲ್ಲಿ ಹೊಸದಾಗಿ Vivo X300 FE ಮೊಬೈಲ್‌ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಅಂದಹಾಗೆ ಇದು ಸಂಸ್ಥೆಯು ಕಳೆದ ವರ್ಷ ಬಿಡುಗಡೆ ಮಾಡಿದ ವಿವೋ X200 FE ಫೋನಿನ ಉತ್ತರಾಧಿಕಾರಿ ಎನ್ನಲಾಗಿದೆ. ಬಿಡುಗಡೆಗೂ ಮುನ್ನವೇ ಮುಂಬರುವ ವಿವೋದ ಹೊಸ ಕಾಂಪ್ಯಾಕ್ಟ್‌ ಫ್ಲ್ಯಾಗ್‌ಶಿಪ್‌ ಫೋನಿನ ಕೆಲವು ಫೀಚರ್ಸ್‌ಗಳು ಬಹಿರಂಗವಾಗಿದ್ದು ಮೊಬೈಲ್‌ ಬಗ್ಗೆ ಕುತೂಹಲ ಹೆಚ್ಚಿಸಿವೆ. Vivo X300 FE ಫೋನ್‌ 12GB RAM ಆಯ್ಕೆ ಪಡೆದಿರುವ ನಿರೀಕ್ಷೆಗಳು ಇವೆ. ಹಾಗಾದರೆ Vivo X300 FE ಮೊಬೈಲ್‌ ಲಾಂಚ್‌ ದಿನಾಂಕ, ನಿರೀಕ್ಷಿತ ಫೀಚರ್ಸ್‌ ಸೇರಿದಂತೆ ಇನ್ನಷ್ಟು ಮಾಹಿತಿಯನ್ನು ಮುಂದೆ ತಿಳಿಯೋಣ.

Also Read : 7,000mAh ಬ್ಯಾಟರಿ ಇರುವ Oppo K13 5G ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌!

Vivo X300 FE ಸ್ಟೋರೇಜ್‌ ಹಾಗೂ ಕಲರ್‌ ಆಯ್ಕೆ

ವಿವೋ ಫೋನ್‌ಗಳ ಲೈನ್‌ಅಪ್‌ಗೆ ಸೇರ್ಪಡೆ ಆಗಲು ಸಜ್ಜಾಗಿರುವ ಹೊಸ Vivo X300 FE ಮೊಬೈಲ್‌ ಲಾಂಚ್‌ಗೂ ಮುನ್ನವೇ ಮಾರುಕಟ್ಟೆಯಲ್ಲಿ ಕುತೂಹಲದ ಅಲೆ ಎಬ್ಬಿಸಿದೆ. ಇನ್ನು ಲೀಕ್ ಮಾಹಿತಿಗಳ ಪ್ರಕಾರ Vivo X300 FE ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿರಬಹುದು. ಅವುಗಳು ಕ್ರಮವಾಗಿ 12GB RAM + 256GB ಮತ್ತು 12GB + 512GB ಎಂದು ನಿರೀಕ್ಷಿಸಲಾಗಿದೆ. ಅಲ್ಲದೇ ಈ ಮೊಬೈಲ್‌ ಬ್ಲ್ಯಾಕ್‌ ಮತ್ತು ಬ್ಲೂ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳು ಇವೆ.

Vivo X300 FE ಫೋನಿನ ನಿರೀಕ್ಷಿತ ಫೀಚರ್ಸ್‌

ವಿವೋ ಕಂಪನಿಯ ಈ ಹೊಸ Vivo X300 FE ಮೊಬೈಲ್‌ 6.31 ಇಂಚಿನ LTPO AMOLED ಡಿಸ್‌ಪ್ಲೇ ಪಡೆದಿರಲಿದ್ದು, ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿರಬಹುದು ಎನ್ನಲಾಗಿದೆ. ಇನ್ನು ಈ ಫೋನ್ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಆಂಡ್ರಾಯ್ಡ್ 16 ಓಎಸ್‌ ಕಾರ್ಯನಿರ್ವಹಿಸುವ ನಿರೀಕ್ಷೆಗಳು ಇವೆ. ಇದರೊಂದಿಗೆ 12GB RAM + 256GB ಮತ್ತು 12GB + 512GB ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿರಬಹುದು.

Vivo X300 FE ಮೊಬೈಲ್‌ ಹಿಂಬದಿಯಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದ್ದು, ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 50MP ಟೆಲಿಫೋಟೋ ಲೆನ್ಸ್ ಹಾಗೂ 8MP ಅಲ್ಟ್ರಾ-ವೈಡ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇರುವ ನಿರೀಕ್ಷೆಗಳು ಇವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು 90W ವೈರ್ಡ್ ಚಾರ್ಜಿಂಗ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಹೊಂದಿರಲಿದೆ ಎನ್ನಲಾಗಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :