ನಾಳೆ ಭಾರತದಲ್ಲಿ Vivo X300 FE ಮೊಬೈಲ್ ಲಾಂಚ್! 50MP ಸೆಲ್ಫಿ ಕ್ಯಾಮೆರಾ ನಿರೀಕ್ಷೆ
ನಾಳೆ ಭಾರತದಲ್ಲಿ ವಿವೋ X300 FE ಸ್ಮಾರ್ಟ್‌ಫೋನ್ ಲಾಂಚ್
ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಪ್ರೊಸೆಸರ್ ಒಳಗೊಂಡಿರಲಿದೆ
ಈ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಪವರ್ ಪಡೆದಿರಲಿದೆ
ವಿವೋ ಸಂಸ್ಥೆಯ Vivo X300 FE ಸ್ಮಾರ್ಟ್‌ಫೋನ್ ಲಾಂಚ್‌ಗೆ ಸಜ್ಜಾಗಿದ್ದು, ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ವಿವೋ ಸಂಸ್ಥೆಯ ನೂತನ ವಿವೋ X300 FE ಮೊಬೈಲ್ ನಾಳೆ (ಮೇ 6 ರಂದು) ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಿಲಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಾಗಿ ಈಗಾಗಲೇ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ತೆರೆಯಲಾಗಿದೆ. ಅಂದಹಾಗೆ ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ನಿಕ್ಕಿ ಆಗಿದೆ. ಇದರ ಜೊತೆಗೆ 6,500mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪವರ್ ಹೊಂದಿರುವ ಸಾಧ್ಯತೆಗಳು ಇವೆ. ಅಲ್ಲದೇ ಇದು ZEISS ಬೆಂಬಲಿತ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ವಿವೋ X300 FE ಮೊಬೈಲ್‌ನ ಲಾಂಚ್ ಹಾಗೂ ನಿರೀಕ್ಷಿತ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
SurveyAlso Read : Airtel ಟೆಲಿಕಾಂನ ಡೇಟಾ ಪ್ಯಾಕ್‌ಗಳಲ್ಲಿ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ!
Vivo X300 FE ಮೊಬೈಲ್ ನಾಳೆ ಬಿಡುಗಡೆ
ವಿವೋ ಕಂಪನಿಯ ಹೊಸ ವಿವೋ X300 FE ಸ್ಮಾರ್ಟ್‌ಫೋನ್ ಪ್ರಿಮಿಯಂ ಮೀಡ್‌ರೇಂಜ್ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ನಾಳೆ (ಮೇ 6 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ನಾಯರ್ ಬ್ಲ್ಯಾಕ್, ಅರ್ಬನ್ ಆಲಿವ್ ಹಾಗೂ ಲಿಲಾಕ್ ಪರ್ಪಲ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.

ವಿವೋ X300 FE ನಿರೀಕ್ಷಿತ ಫೀಚರ್ಸ್
ಮುಂಬರುವ ಹೊಸ ವಿವೋ X300 FE ಸ್ಮಾರ್ಟ್‌ಫೋನ್ 6.31 ಇಂಚಿನ 1.5K LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದ್ದು, 120Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿರಲಿದೆ. ಅಲ್ಲದೇ ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 50MP ಹಾಗೂ 8MP ಸೆನ್ಸಾರ್ ಬಲದಲ್ಲಿ ಇರಲಿವೆ.
ಇನ್ನು ವಿವೋ X300 FE ಸ್ಮಾರ್ಟ್‌ಫೋನ್ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಸೆನ್ಸಾರ್‌ನ ಕ್ಯಾಮೆರಾ ಪಡೆದಿರಲಿದೆ. ಈ ಮೊಬೈಲ್ 6,500mAh ಸಾಮರ್ಥ್ಯದ ಬ್ಯಾಟರಿ ಪವರ್ ಹೊಂದಿರಲಿದೆ. ಇದಕ್ಕೆ ಪೂರಕವಾಗಿ 90W ಫಾಸ್ಟ್ ವೈರ್ಡ್ ಚಾರ್ಜಿಂಗ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿರಲಿದೆ ಎನ್ನಲಾಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile