ವಿವೋ ಕಂಪನಿಯ Vivo X300 FE ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜಾಗಿದ್ದು, ಗ್ರಾಹಕರ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ ವಿವೋ ಸಂಸ್ಥೆಯ ನೂತನ ವಿವೋ X300 FE ಮೊಬೈಲ್ ಇಂದು (ಮೇ 6 ರಂದು) ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಿಲಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಾಗಿ ಈಗಾಗಲೇ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ತೆರೆಯಲಾಗಿದೆ. ಅಂದಹಾಗೆ ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ನಿಕ್ಕಿ ಆಗಿದೆ. ಇದರ ಜೊತೆಗೆ 6,500mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪವರ್ ಹೊಂದಿರುವ ಸಾಧ್ಯತೆಗಳು ಇವೆ. ಅಲ್ಲದೇ ಇದು ZEISS ಬೆಂಬಲಿತ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ವಿವೋ X300 FE ಮೊಬೈಲ್‌ನ ಲಾಂಚ್ ಹಾಗೂ ನಿರೀಕ್ಷಿತ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : ಅಮೆಜಾನ್‌ನಲ್ಲಿ Samsung Galaxy M56 5G ಮೊಬೈಲ್‌ಗೆ ಬಿಗ್ ಡಿಸ್ಕೌಂಟ್!
ವಿವೋ ಕಂಪನಿಯ ಹೊಸ ವಿವೋ X300 FE ಸ್ಮಾರ್ಟ್‌ಫೋನ್ ಪ್ರಿಮಿಯಂ ಮೀಡ್‌ರೇಂಜ್ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇಂದು (ಮೇ 6 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ನಾಯರ್ ಬ್ಲ್ಯಾಕ್, ಅರ್ಬನ್ ಆಲಿವ್ ಹಾಗೂ ಲಿಲಾಕ್ ಪರ್ಪಲ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.
ನೂತನ ವಿವೋ X300 FE ಸ್ಮಾರ್ಟ್‌ಫೋನ್ 6.31 ಇಂಚಿನ 1.5K LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದ್ದು, 120Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿರಲಿದೆ. ಅಲ್ಲದೇ ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 50MP ಹಾಗೂ 8MP ಸೆನ್ಸಾರ್ ಬಲದಲ್ಲಿ ಇರಲಿವೆ.
ಹಾಗೆಯೇ ವಿವೋ X300 FE ಸ್ಮಾರ್ಟ್‌ಫೋನ್ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಸೆನ್ಸಾರ್‌ನ ಕ್ಯಾಮೆರಾ ಪಡೆದಿರಲಿದೆ. ಈ ಮೊಬೈಲ್ 6,500mAh ಸಾಮರ್ಥ್ಯದ ಬ್ಯಾಟರಿ ಪವರ್ ಹೊಂದಿರಲಿದೆ. ಇದಕ್ಕೆ ಪೂರಕವಾಗಿ 90W ಫಾಸ್ಟ್ ವೈರ್ಡ್ ಚಾರ್ಜಿಂಗ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿರಲಿದೆ ಎನ್ನಲಾಗಿದೆ.