ಜನಪ್ರಿಯ Vivo X300 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ದಿಢೀರ್‌ ಏರಿಕೆ! ಹೊಸ ಬೆಲೆ ನೋಡಿ

HIGHLIGHTS

ವಿವೋ ‍X300 FE ಮೊಬೈಲ್‌ ಬೆಲೆಯಲ್ಲಿ ಏಕಾಏಕಿ ಏರಿಕೆ

ಈ ಮೊಬೈಲ್‌ 90W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್ ಪಡೆದಿದೆ

ವಿವೋ ‍X300 FE ಫೋನ್‌ ಬೆಲೆಯಲ್ಲಿ ಈಗ 3,000ರೂ.ಗಳ ಏರಿಕೆ

ಜನಪ್ರಿಯ Vivo X300 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ದಿಢೀರ್‌ ಏರಿಕೆ! ಹೊಸ ಬೆಲೆ ನೋಡಿ

ವಿವೋ ಮೊಬೈಲ್‌ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ Vivo X300 FE ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆದರೆ ಇದೀಗ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ದಿಢೀರ್‌ ಹೆಚ್ಚಳವಾಗಿದ್ದು ಗ್ರಾಹಕರು ಅಚ್ಚರಿಯಿಂದ ನೋಡುವಂತಾಗಿದೆ. ವಿವೋ ಮೊಬೈಲ್‌ ಕಂಪನಿಯು ಈ ಫೋನಿನ ಹೊಸ ಬೆಲೆಯನ್ನು ಅಪ್‌ಡೇಟ್‌ ಮಾಡಿದೆ. ಅಂದಹಾಗೆ ವಿವೋ ‍X300 FE ಮೊಬೈಲ್‌ನ ಎಲ್ಲಾ ವೇರಿಯಂಟ್‌ಗಳ ಬೆಲೆಯಲ್ಲಿ 3,000 ರೂ.ಗಳ ಏರಿಕೆಯನ್ನು ಕಂಡಿದೆ. ಈ ಫೋನ್‌ 6,500mAh ಬ್ಯಾಟರಿ ಸಪೋರ್ಟ್‌ ಪಡೆದಿರುವ ಜೊತೆಗೆ 90W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಹಾಗಾದರೆ ವಿವೋ ‍X300 FE ಫೋನಿನ ಹೊಸ ಬೆಲೆ ಹಾಗೂ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಇನ್ನು ಕೆಲವೇ ದಿನಗಳಲ್ಲಿ Moto G Max ಮೊಬೈಲ್‌ ಲಾಂಚ್! ಬರೋಬ್ಬರಿ 7,000mAh ಬ್ಯಾಟರಿ

Vivo X300 FE ಫೋನ್‌ ಬೆಲೆ ಏರಿಕೆಯ ಮಾಹಿತಿ

ವಿವೋ ‍X300 FE ಫೋನ್‌ ಬೆಲೆ ಏರಿಕೆ ಪಡೆದಿದೆ. ಇದು ಒನ್‌ಪ್ಲಸ್‌ ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಬಿಗ್ ಶಾಕ್ ಎನಿಸಿದೆ. ಈ ಫೋನಿನ 12GB + 256GB ವೇರಿಯಂಟ್‌ ಹಳೆಯ ಬೆಲೆ 86,999 ರೂ.ಗಳ ಆಗಿದೆ. ಈ ವೇರಿಯಂಟ್‌ ಹೊಸ ದರ 89,999 ರೂ.ಗಳಿಗೆ ಲಭ್ಯ. ಹಾಗೆಯೇ 12GB + 512GB ವೇರಿಯಂಟ್‌ ಹಳೆಯ ಬೆಲೆ 96,999 ರೂ.ಗಳ ಆಗಿದೆ. ಈ ವೇರಿಯಂಟ್‌ ಹೊಸ ದರ 99,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಲಿಲಾಕ್ ಪರ್ಪಲ್, ನಾಯ್ರ್ ಬ್ಲ್ಯಾಕ್ ಮತ್ತು ಅರ್ಬನ್ ಆಲಿವ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

vivo X300 FE

ವಿವೋ ‍X300 FE ಫೀಚರ್ಸ್‌ ಮಾಹಿತಿ

ಹೊಸ ವಿವೋ ‍X300 FE ಮೊಬೈಲ್‌ 6.31 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 94.38 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಇಲೈಟ್ ಜೆನ್ 5 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ OriginOS 6 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ವಿವೋ ‍X300 FE ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ವೈಲ್ಡ್‌ ಆಂಗಲ್‌ ಸೆನ್ಸಾರ್ ರಚನೆ ಹೊಂದಿದೆ. ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile