ಭಾರತದಲ್ಲಿ ದೈತ್ಯ Vivo ‍X300 Ultra ಸ್ಮಾರ್ಟ್‌ಫೋನ್‌ ಬಿಡುಗಡೆ! 200MP ಕ್ಯಾಮೆರಾ ವಿಶೇಷ

HIGHLIGHTS

ವಿವೋ ‍X300 ಅಲ್ಟ್ರಾ ಫೋನ್‌ ಟ್ರಿಪಲ್‌ ಕ್ಯಾಮೆರಾದೊಂದಿಗೆ ಬಿಡುಗಡೆ

ವಿವೋ ‍X300 ಅಲ್ಟ್ರಾ ಮೊಬೈಲ್‌ 200MP ಕ್ಯಾಮೆರಾ ರಚನೆ ಪಡೆದುಕೊಂಡಿದೆ

ವಿವೋದ ಈ ಫೋನ್‌ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಸೌಲಭ್ಯ ಒಳಗೊಂಡಿದೆ

ಜನಪ್ರಿಯ ವಿವೋ ಸಂಸ್ಥೆಯು ತನ್ನ ಬಹುನಿರೀಕ್ಷಿತ Vivo ‍X300 Ultra ಸ್ಮಾರ್ಟ್‌ಫೋನ್‌ ಅನ್ನು ಇಂದು (ಮೇ 6 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಮಾಡಿದೆ. ಪ್ರೀಮಿಯಂ ಫ್ಲ್ಯಾಗ್‌ಶಿಪ್‌ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಇಲೈಟ್ ಜೆನ್ 5 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್‌ 6,600mAh ಸಿಲಿಕಾನ್‌ ಕಾರ್ಬನ್‌ ಬ್ಯಾಟರಿ ಸಪೋರ್ಟ್‌ ಒಳಗೊಂಡಿದೆ. ಇದರೊಂದಿಗೆ 200 ಮೆಗಾಪಿಕ್ಸೆಲ್ LYTIA 901 ಸೆನ್ಸಾರ್ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ ಇದು ಎಕ್ಲಿಪ್ಸ್ ಬ್ಲ್ಯಾಕ್‌ ಮತ್ತು ವಿಕ್ಟೋರಿಯಾ ಗ್ರೀನ್‌ ಕಲರ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೆ ವಿವೋ ‍X300 ಅಲ್ಟ್ರಾ ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ Jio ಕ್ರಿಕೆಟ್‌ ಡೇಟಾ ಪ್ಯಾಕ್‌ ಯೋಜನೆಗಳ ಮಾಹಿತಿ!

Vivo ‍X300 Ultra ಬೆಲೆ ಹಾಗೂ ಲಭ್ಯತೆ

ನೂತನ ವಿವೋ ‍X300 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸಿಂಗಲ್ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 16GB RAM + 512GB ಸ್ಟೋರೇಜ್ ವೇರಿಯಂಟ್‌ ಬೆಲೆ 1,59,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಎಕ್ಲಿಪ್ಸ್ ಬ್ಲಾಕ್ ಮತ್ತು ವಿಕ್ಟರಿ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ವಿವೋ ಝೈಸ್ ಟೆಲಿಫೋಟೋ ಎಕ್ಸ್‌ಟೆಂಡರ್ ಜೆನ್ 2 ಅಲ್ಟ್ರಾ (400mm ಸಮಾನ) ಬೆಲೆ 27,999 ರೂ. ಆಗಿದ್ದರೆ, ವಿವೋ ಇಮೇಜಿಂಗ್ ಗ್ರಿಪ್ ಕಿಟ್‌ನ ಬೆಲೆ 11,999 ರೂ. ಆಗಿದೆ.

ವಿವೋ ‍X300 ಅಲ್ಟ್ರಾ ಸದ್ಯ ವಿವೋ, ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಪ್ರಿ-ಆರ್ಡರ್‌ಗೆ ಲಭ್ಯವಿದೆ. ಈ ಫೋನ್‌ ಇದೇ ಮೇ 14 ರಿಂದ ಅಮೆಜಾನ್, ಕ್ರೋಮಾ, ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್, ವಿಜಯ್ ಸೇಲ್ಸ್ ಮತ್ತು ಇತರ ಆನ್‌ಲೈನ್ ರೀಟೇಲ್ ಸ್ಟೋರ್‌ಗಳು ಹಾಗೂ ಆಫ್‌ಲೈನ್ ರೀಟೇಲ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ವಿವೋ ‍X300 ಅಲ್ಟ್ರಾ ಮೊಬೈಲ್‌ ಫೀಚರ್ಸ್‌

ಹೊಸ ವಿವೋ ‍X300 ಅಲ್ಟ್ರಾ ಮೊಬೈಲ್‌ 6.82 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 94.49 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು HDR ಸಪೋರ್ಟ್‌ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಇಲೈಟ್ ಜೆನ್ 5 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ವಿವೋ ‍X300 ಅಲ್ಟ್ರಾ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 200 ಮೆಗಾಪಿಕ್ಸೆಲ್ LYTIA 901 ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 50 ಮೆಗಾಪಿಕ್ಸೆಲ್ ವೈಲ್ಡ್‌ ಆಂಗಲ್‌ ಸೆನ್ಸಾರ್ ರಚನೆ ಹೊಂದಿದೆ. ತೃತೀಯ ಕ್ಯಾಮೆರಾವು 200 ಮೆಗಾಪಿಕ್ಸಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,600mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :