ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ Vivo ಇದೀಗ Vivo X300s ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ವಾರವೇ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಪಕ್ಕಾ ಎನ್ನಲಾಗಿದೆ. ಇನ್ನು ಮುಂಬರುವ ಮೊಬೈಲ್ ಕುರಿತು ವಿವೋ ಈಗಾಗಲೇ ಹಲವಾರು ಟೀಸರ್‌ಗಳನ್ನು ಶೇರ್ ಮಾಡಿದ್ದು ಟೀಸರ್‌ಗಳು ಫೋನಿನ ಪ್ರಮುಖ ಫೀಚರ್ಸ್‌ಗಳ ಬಗ್ಗೆ ಸುಳಿವು ನೀಡುತ್ತಿವೆ. ಈ ಮೊಬೈಲ್ 7,100mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರಲಿದ್ದು ಇದರೊಂದಿಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಹೊಂದಿರುವ ನಿರೀಕ್ಷೆಗಳು ಇವೆ. ಹಾಗೆಯೇ ಇದು 200 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗಾದರೆ ಮಾರುಕಟ್ಟೆಗೆ ಬರಲಿರುವ ವಿವೋ X300s ಫೋನ್ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ನಾಳೆ Realme P4 Lite 5G ಮೊಬೈಲ್ ಖರೀದಿಗೆ ಲಭ್ಯ! ಆರಂಭಿಕ ಆಫರ್ ಪಡೆಯಬಹುದು
Vivo ಸಂಸ್ಥೆಯ ಮುಂಬರುವ ನೂತನ ವಿವೋ X300s ಸ್ಮಾರ್ಟ್‌ಫೋನ್ ನಿರೀಕ್ಷಿತ ಫೀಚರ್ಸ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡುವಂತೆ ಇವೆ. ಅಂದಹಾಗೆ ಈ ಮೊಬೈಲ್ ಇದೇ ಮಾರ್ಚ್ 30 ರಂದು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ ಎಂದು ವರದಿಗಳಾಗಿವೆ. ಅಂದಹಾಗೆ ಈ ಫೋನ್ ಜೊತೆಗೆ ವಿವೋ X300 Ultra ಮೊಬೈಲ್ ಸಹ ಲಾಂಚ್ ಆಗುವ ಸಾಧ್ಯತೆಗಳು ಇವೆ.
ಮುಂಬರುವ ಹೊಸ ವಿವೋ X300s ಮೊಬೈಲ್ 6.78 ಇಂಚಿನ 1.5K+ ಫ್ಲಾಟ್ ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಇದು 3D ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ 2.0 ತಂತ್ರಜ್ಞಾನ ಪಡೆದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 12GB + 256GB, 12GB + 512GB, 16GB + 512GB ಮತ್ತು 16GB + 1TB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.
ಹಾಗೆಯೇ ವಿವೋ X300s ಮೊಬೈಲ್ ಹಿಂಬದಿ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್‌ನಲ್ಲಿ ಇರಲಿದೆ ಎನ್ನಲಾಗಿದೆ. ಹಾಗೆಯೇ 50MP ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್ ಹಾಗೂ 50MP ಪೆರಿಸ್ಕೋಪ್ ಲೆನ್ಸ್ ಸಹ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಮುಂಭಾಗದಲ್ಲಿ 50MP ಸೆಲ್ಫಿ ಕ್ಯಾಮೆರಾ ಪಡೆದಿರುವ ಸಾಧ್ಯತೆಗಳು ಅಧಿಕ. ಇನ್ನು ಈ ಫೋನ್ 7100mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 40W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಇರುವ ನಿರೀಕ್ಷೆಗಳು ಇವೆ.
ಹಾಗೆಯೇ ವಿವೋ X300 ಅಲ್ಟ್ರಾ ಮೊಬೈಲ್ 6.82 ಇಂಚಿನ 2K+ 144Hz OLED ಸ್ಕ್ರೀನ್ ಪಡೆದಿರಲಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5 SoC ಚಿಪ್‌ಸೆಟ್ ಪ್ರೊಸೆಸರ್ ಇರಲಿದೆ ಎನ್ನಲಾಗಿದೆ. ಇದರ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್ ಸಾಮರ್ಥ್ಯದಲ್ಲಿ ಇರುವ ಸಾಧ್ಯತೆಗಳು ಇವೆ. ಹಾಗೆಯೇ ಈ ಮೊಬೈಲ್ 6,600mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ.