ಮಾರುಕಟ್ಟೆಗೆ ಬಂದೇ ಬಿಡ್ತು Vivo X500 Pro ಸ್ಮಾರ್ಟ್‌ಫೋನ್‌; ಬೆಲೆ ಹಾಗೂ ಫೀಚರ್ಸ್‌ ನೋಡಿ

Highlights

ಭಾರತದಲ್ಲಿ ವಿವೋ X500 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್

ವಿವೋ X500 ಪ್ರೊ ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ

ಈ ಮೊಬೈಲ್‌ MediaTek Dimensity 9600M ಪ್ರೊಸೆಸರ್‌ ಹೊಂದಿದೆ

ಪ್ರಮುಖ ಮೊಬೈಲ್‌ ಸಂಸ್ಥೆಗಳ ಪೈಕಿ ಒಂದಾಗಿರುವ ವಿವೋ ಇದೀಗ ಹೊಸದಾಗಿ Vivo X500 Pro ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,510mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ರಮುಖ ಹೈಲೈಟ್‌ ಎನಿಸಿದೆ. ಇನ್ನು ಈ ಫೋನ್‌ MediaTek Dimensity 9600 Pro ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿರುವ ಜೊತೆಗೆ ಆಕರ್ಷಕ ಕಲರ್‌ ಆಯ್ಕೆಯನ್ನು ಹೊಂದಿದೆ. ಹಾಗಾದರೆ ವಿವೋ X500 ಪ್ರೊ ಫೋನ್‌ ಬೆಲೆ, ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Vivo X500 Pro ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಬಹುನಿರೀಕ್ಷಿತ ವಿವೋ X500 ಪ್ರೊ ಮೊಬೈಲ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಸೂಪರ್ ಪ್ರೀಮಿಯಂ ಬೆಲೆಯಲ್ಲಿ ಎಂಟ್ರಿ ಕೊಟ್ಟಿರುವ ಇಟ್ಟಿರುವ ಈ ಮೊಬೈಲ್‌ನ 12GB RAM + 256GB ವೇರಿಯಂಟ್‌ ಬೆಲೆಯು 1,49,999 ರೂ.ಗಳು ಆಗಿದೆ. ಈ ಫೋನ್‌ ಎಥರನ್ಲ್ ಬ್ಲ್ಯಾಕ್‌ ಮತ್ತು ಅಪೆಕ್ಸ್‌ ಆರೆಂಜ್ ಕಲರ್‌ ಆಯ್ಕೆಯನ್ನು ಒಳಗೊಂಡಿದೆ. ಈ ಫೋನ್ ಡಿಸೆಂಬರ್ 3, 2026 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್‌ ಮತ್ತು ವಿವೋ ಭಾರತ ಆನ್‌ಲೈನ್ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಬರಲಿದೆ.

ವಿವೋ X500 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ X500 ಪ್ರೊ ಮೊಬೈಲ್‌ 6.36 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 144Hz ವರೆಗಿನ ರಿಫ್ರೆಶ್ ರೇಟ್ ಮತ್ತು 2660 x 1216 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ನೀಡುತ್ತದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ MediaTek Dimensity 9600 Pro ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ಪಡೆದಿದೆ. ಅಲ್ಲದೇ ಈ ಫೋನ್ OriginOS 7 ಬೆಂಬಲಿತ Android 17 ಓಎಸ್‌ ಅನ್ನು ಒಳಗೊಂಡಿದೆ.

ವಿವೋ X500 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಸೆಟ್‌ಅಪ್‌ ಪಡೆದಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ತೃತೀಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮುಂಭಾಗದಲ್ಲಿ 50MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೇ ಈ ಫೋನ್‌ 6,510mAh ಬ್ಯಾಟರಿಯನ್ನು ಹೊಂದಿದ್ದು, 90W ವೇಗದ ಚಾರ್ಜಿಂಗ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile