Vivo Y19s 5G ಸ್ಮಾರ್ಟ್ಫೋನ್ ಬೆಲೆಯಲ್ಲಿ ಈಗ ಜಬರ್ದಸ್ತ್ ಇಳಿಕೆ! ಖರೀದಿ ಮಾಡ್ತೀರಾ?
ಫ್ಲಿಪ್ಕಾರ್ಟ್ನಲ್ಲಿ ವಿವೋ Y19s 5G ಮೊಬೈಲ್ಗೆ ಬಿಗ್ ಆಫರ್
ವಿವೋ Y19s 5G ಮೊಬೈಲ್ 6000mAh ಬ್ಯಾಟರಿ ಸೌಲಭ್ಯ ಪಡೆದಿದೆ
ವಿವೋ Y19s 5G ಸ್ಮಾರ್ಟ್ಫೋನ್ ಎರಡು ಆಕರ್ಷಕ ಕಲರ್ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo Y19s 5G ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ 6300 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ವಿವೋ Y19s 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vivo Y19s 5G ಮೊಬೈಲ್ ಬೆಲೆಯಲ್ಲಿ ಇಳಿಕೆ
ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ Y19s 5G ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 17,099 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಮೆಜೆಸ್ಟಿಕ್ ಗ್ರೀನ್ ಹಾಗೂ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ವಿವೋ Y19s 5G ಫೋನ್ ಫೀಚರ್ಸ್
ವಿವೋ Y19s 5G ಸ್ಮಾರ್ಟ್ಫೋನ್ 6.74-ಇಂಚಿನ LCD ಪರದೆಯನ್ನು 720×1,600 ಪಿಕ್ಸೆಲ್ಗಳ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ. ಇದರ ಡಿಸ್ಪ್ಲೇಯು 700 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಅನ್ನು ಪಡೆದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ 6300 ಚಿಪ್ಸೆಟ್ ಪ್ರೊಸೆಸರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 15 ಆಧಾರಿತ FuntouchOS 15 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ವಿವೋ Y19s 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 0.8 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6000mAh ಬ್ಯಾಟರಿ ಬ್ಯಾಕ್ಅಪ್ ಜೊತೆಗೆ ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile