ಜನಪ್ರಿಯ ವಿವೋ ಸಂಸ್ಥೆಯು ನೂತನವಾಗಿ Vivo Y31T 5G ಸ್ಮಾರ್ಟ್‌ಫೋನ್ ಅನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಇನ್ನು ವಿವೋ Y31T 5G ಮೊಬೈಲ್ 7200mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್ ಪಡೆದಿರುವುದು ಬಹುತೇಕ ಪಕ್ಕಾ ಆಗಿದೆ. ಹಾಗೆಯೇ ಈ ಮೊಬೈಲ್ ಸ್ನ್ಯಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುವ ಸಾಧ್ಯತೆಗಳು ಇವೆ. ಇದು ಮೂರು ಕ್ರಿಮ್ಸನ್ ರೆಡ್, ಗೋಲ್ಡನ್ ಮಿಸ್ಟ್ ಮತ್ತು ಸೀಶೋರ್ ಕಲರ್ ಆಯ್ಕೆ ಪಡೆದಿರುವ ಜೊತೆಗೆ LCD ಡಿಸ್‌ಪ್ಲೇ ಪಡೆದಿರುವ ನಿರೀಕ್ಷೆಗಳು ಹೆಚ್ಚಿವೆ. ಹಾಗಾದರೇ ವಿವೋ Y31T 5G ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : Motorola Edge 70 Fusion ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ! 7,000mAh ಬ್ಯಾಟರಿ
ವಿವೋ ಕಂಪನಿಯು ವಿವೋ Y31T 5G ಮೊಬೈಲ್ ಬಿಡುಗಡೆ ದಿನಾಂಕವನ್ನು ಇನ್ನೂ ದೃಢಪಡಿಸಿಲ್ಲ. ಆದರೆ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಫೋನ್ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಫೋನ್ ಕ್ರಿಮ್ಸನ್ ರೆಡ್, ಗೋಲ್ಡನ್ ಮಿಸ್ಟ್ ಮತ್ತು ಸೀಶೋರ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ವಿವೋ Y31T 5G ಸ್ಮಾರ್ಟ್‌ಫೋನ್ 6.75 ಇಂಚಿನ HD+ LCD ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು ಗರಿಷ್ಠ 1,250 ನಿಟ್ಸ್ ಬ್ರೈಟ್‌ನೆಸ್ ನೀಡಲಿದೆ. ಹೀಗಾಗಿ ಸ್ಕ್ರೋಲಿಂಗ್ ಮತ್ತು ವಿಡಿಯೋ ವೀಕ್ಷಣೆಯ ಅನುಭವ ಉತ್ತಮವಾಗಿರುವ ನಿರೀಕ್ಷೆಯಿದೆ. ಕಾರ್ಯಕ್ಷಮತೆಗಾಗಿ ಫೋನ್‌ನಲ್ಲಿ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಬಳಸಲಾಗಿದೆ. ಇದಕ್ಕೆ ಗರಿಷ್ಠ 6GB RAM ಮತ್ತು 256GB UFS 3.1 ಆಂತರಿಕ ಸ್ಟೋರೇಜ್ ಸೌಲಭ್ಯ ಇರಲಿದೆ.
ಹಾಗೆಯೇ ಕ್ಯಾಮೆರಾ ವಿಭಾಗದಲ್ಲಿ ವಿವೋ Y31T 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ 50MP ಮುಖ್ಯ ಕ್ಯಾಮೆರಾ ಜೊತೆಗೆ 2MP ಕ್ಯಾಮೆರಾ ಇರಲಿದೆ. ಅಲ್ಲದೇ ಸೆಲ್ಫಿ ಮತ್ತು ವಿಡಿಯೋ ಕಾಲ್‌ಗಳಿಗಾಗಿ ಮುಂಭಾಗದಲ್ಲಿ 8MP ಸೆಲ್ಫಿ ಕ್ಯಾಮೆರಾ ಪಡೆದಿರುವ ನಿರೀಕ್ಷೆಯಿದೆ. ವಿವೋ Y31T 5G ಸ್ಮಾರ್ಟ್‌ಫೋನ್ 7,200mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಹೊಂದಿದೆ.