ಸೈಲೆಂಟ್‌ ಆಗಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Vivo Y31T 5G ಸ್ಮಾರ್ಟ್‌ಫೋನ್‌! ಬಿಗ್ ಬ್ಯಾಟರಿ

HIGHLIGHTS

ವಿವೋದ ಈ ಫೋನ್‌ 7,200mAh ಬ್ಯಾಟರಿ ಪಡೆದುಕೊಂಡಿದೆ

ವಿವೋ Y31T 5G ಸ್ಮಾರ್ಟ್‌ಫೋನ್‌ 50MP ಕ್ಯಾಮೆರಾ ಒಳಗೊಂಡಿದೆ

ಈ ಮೊಬೈಲ್‌ ಕ್ರಿಮ್ಸನ್ ರೆಡ್, ಗೋಲ್ಡನ್ ಮಿಸ್ಟ್ ಮತ್ತು ಸೀಶೋರ್ ಕಲರ್‌ನಲ್ಲಿ ಲಭ್ಯ

ವಿವೋ ಮೊಬೈಲ್‌ ಕಂಪನಿಯ ಸದ್ದಿಲ್ಲದೇ Vivo Y31T 5G ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ ಮೊಬೈಲ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 2 ಚಿಪ್‌ಸೆಟ್ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 7,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ರಿಮ್ಸನ್ ರೆಡ್, ಗೋಲ್ಡನ್ ಮಿಸ್ಟ್ ಮತ್ತು ಸೀಶೋರ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ವಿವೋ Y31T 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಭಾರತದಲ್ಲಿ Realme P4s 5G ಮೊಬೈಲ್‌ ಬಿಡುಗಡೆ! ಬರೋಬ್ಬರಿ 8,000mAh ಬ್ಯಾಟರಿ ಸೌಲಭ್ಯ

Vivo Y31T 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ರಿಯಲ್‌ಮಿ ಕಂಪನಿಯ ವಿವೋ Y31T 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್‌ ವೇರಿಯಂಟ್‌ 25,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ವೇರಿಯಂಟ್‌ 29,999 ರೂ.ಗಳ ಬೆಲೆ ಪಡೆದುಕೊಂಡಿದೆ. ಹಾಗೆಯೇ 6GB RAM + 256GB ಸ್ಟೋರೇಜ್ ವೇರಿಯಂಟ್‌ 34,999 ರೂ.ಗಳ ಬೆಲೆಯನ್ನು ಒಳಗೊಂಡಿದೆ. ಈ ಫೋನ್‌ ಕ್ರಿಮ್ಸನ್ ರೆಡ್, ಗೋಲ್ಡನ್ ಮಿಸ್ಟ್ ಮತ್ತು ಸೀಶೋರ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಭಾರತದಲ್ಲಿ ಫ್ಲಿಪ್‌ಕಾರ್ಟ್, ವಿವೋ ಆನ್‌ಲೈನ್ ಸ್ಟೋರ್ ಮತ್ತು ಇತರ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಲಭ್ಯವಿದೆ.

ವಿವೋ Y31T 5G ಮೊಬೈಲ್‌ ಫೀಚರ್ಸ್‌

ವಿವೋ Y31T 5G ಮೊಬೈಲ್‌ 6.75 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 720 x 1,608 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ಮೂರು ಭಿನ್ನ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್‌ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಬೆಂಬಲವನ್ನು ಸಹ ಪಡೆದಿದೆ.

ಹಾಗೆಯೇ ವಿವೋ Y31T 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಇದು 5G, 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 4.2, USB ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್‌ ಮಾಡುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :