Vivo Y400 5G Launched
ಭಾರತದಲ್ಲಿ ವಿವೋ ಸ್ಮಾರ್ಟ್ಫೋನ್ ಬ್ರಾಂಡ್ ತನ್ನ ಲೇಟೆಸ್ಟ್ Vivo Y400 5G ಸ್ಮಾರ್ಟ್ಫೋನ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಸುಮಾರು 20,000 ರೂಗಳೊಳಗೆ ಡ್ಯುಯಲ್ ಕ್ಯಾಮೆರಾದಲ್ಲಿ ಪ್ರೈಮರಿ 50MP ಸೋನಿ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಈ Vivo Y400 5G ಸ್ಮಾರ್ಟ್ಫೋನ್ 7ನೇ ಆಗಸ್ಟ್‌ನಿಂದ 2025 ನಿಂದ ಮೊದಲ ಮಾರಾಟಕ್ಕೆ ಬರಲಿದೆ. ಈ ಮೂಲಕ ಈ ಸ್ಮಾರ್ಟ್ಫೋನ್ ಆಫರ್ ಬೆಲೆ ಮತ್ತು ಸಂಪೂರ್ಣ ಫೀಚರ್ಗಳೇನು ಎಲ್ಲವನ್ನು ಈ ಕೆಳಗೆ ತಿಳಿಯಬಹುದು.
Vivo Y400 5G ಸ್ಮಾರ್ಟ್ಫೋನ್ 6.67 ಇಂಚಿನ AMOLED (1,080×2,400 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಹೊಂದಿದೆ. Vivo Y400 5G ಫೋನ್ ಡ್ಯುಯಲ್ ಕ್ಯಾಮೆರಾದಲ್ಲಿ ಪ್ರೈಮರಿ 50MP ಸೋನಿ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
Vivo Y400 5G ಫೋನ್ Snapdragon 4 Gen 2 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 15.0.2 ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, eSIM Support, AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Vivo Y400 5G ಸ್ಮಾರ್ಟ್ಫೋನ್ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Vivo Y400 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಎರಡು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹21,999 ರೂಗಳಿಗೆ ಮತ್ತು ಇದರ ಮತ್ತೊಂದು ಇದರ 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹23,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡು ಬಳಸಿಕೊಂಡು ಸುಮಾರು 1000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ Vivo Y400 5G ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು 19,999 ರೂಗಳ ವರೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಪ್ರಯತ್ನಿಸಬಹುದು.
ಅಲ್ಲದೆ Vivo Y400 5G ಸ್ಮಾರ್ಟ್ಫೋನ್ ಮೇಲೆ ಅಮೆಜಾನ್ ನಿಮಗೆ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Vivo Y400 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 22,200 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು. ಆದರೆ ಈ ಡೀಲ್ ಬೆಲೆ ನಿಮ್ಮ ಹಳೆ ಫೋನಿನ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.