Xiaomi 17
ಶಿಯೋಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ಶಿಯೋಮಿ 17 ಸರಣಿಯು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸರಣಿಯು ನಾಳೆ (ಮಾರ್ಚ್ 11 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಅಂದಹಾಗೆ ಈ ಹೊಸ ಸರಣಿಯು Xiaomi 17 ಮತ್ತು Xiaomi 17 Ultra ಹೆಸರಿನ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಈ ಎರಡೂ ಮೊಬೈಲ್‌ಗಳು ಕ್ವಾಲ್ಕಾಮ್‌ನ ಉನ್ನತ ಶ್ರೇಣಿಯ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿವೆ. ಹಾಗೆಯೇ ಶಿಯೋಮಿ 17 ಮತ್ತು ಶಿಯೋಮಿ 17 ಅಲ್ಟ್ರಾ ಮಾಡೆಲ್‌ಗಳು ಲೈಕಾ-ಟ್ಯೂನ್ಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಶಿಯೋಮಿ 17 ಅಲ್ಟ್ರಾ 200 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ಅನ್ನು ಸಹ ಒಳಗೊಂಡಿದೆ. ಹಾಗಾದರೆ ಶಿಯೋಮಿ 17 ಮತ್ತು ಶಿಯೋಮಿ 17 ಅಲ್ಟ್ರಾ ಮೊಬೈಲ್‌ಗಳ ಲಾಂಚ್ ಡೇಟ್, ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Amazon EPL 2026 ಸೇಲ್: Redmi Note 15 5G ಖರೀದಿಸುವು ಪ್ಲಾನ್ ಇದ್ರೆ, ತಡ ಮಾಡಬೇಡಿ!
ನೂತನ ಶಿಯೋಮಿ 17 ಮತ್ತು ಶಿಯೋಮಿ 17 ಅಲ್ಟ್ರಾ ಮೊಬೈಲ್‌ಗಳು ನಾಳೆ (ಮಾರ್ಚ್ 11 ರಂದು) ಭಾರತದಲ್ಲಿ ಲಾಂಚ್ ಆಗಲಿವೆ. ಶಿಯೋಮಿ 17 ಫೋನ್ ಆಲ್ಪೈನ್ ಪಿಂಕ್, ಕಪ್ಪು, ಐಸ್ ಬ್ಲೂ ಮತ್ತು ವೆಂಚರ್ ಗ್ರೀನ್ ಎಂಬ ನಾಲ್ಕು ಬಣ್ಣಗಳಲ್ಲಿ ಲಭ್ಯವಾಗಬಹುದು. ಅದೇ ರೀತಿ ಶಿಯೋಮಿ 17 ಅಲ್ಟ್ರಾ ಫೋನ್ ಬ್ಲ್ಯಾಕ್, ಸ್ಟಾರ್‌ಲಿಟ್ ಗ್ರೀನ್ ಮತ್ತು ವೈಟ್ ಬಣ್ಣಗಳಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಇನ್ನು ಈ ಸರಣಿಯು ಅಮೆಜಾನ್ ಇ ಕಾಮರ್ಸ್ ಮೂಲಕ ಮಾರಾಟ ಪ್ರಾರಂಭಿಸಲಿದೆ.
ಶಿಯೋಮಿ 17 ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.3 ಇಂಚಿನ 1.5K OLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ ಸ್ಕ್ರೀನ್ 3,500 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ 2,656×1,220 ಪಿಕ್ಸಲ್ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ ಈ ನೂತನ ಮೊಬೈಲ್ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯ ಪಡೆದಿದೆ. ಅಲ್ಲದೇ 100W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,330mAh ಬ್ಯಾಟರಿ ಪವರ್ ಹೊಂದಿದೆ. ಈ ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಅವುಗಳು ಕ್ರಮವಾಗಿ 50MP + 50MP + 50MP ಸೆನ್ಸಾರ್ ಪಡೆದಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾ ಸಹ 50MP ಸೆನ್ಸಾರ್ ಹೊಂದಿದೆ.
ನೂತನ ಶಿಯೋಮಿ 17 ಅಲ್ಟ್ರಾ ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.9 ಇಂಚಿನ 1.5K LTPO AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ ಸ್ಕ್ರೀನ್ 1,060 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಜೊತೆಗೆ ಡ್ರ್ಯಾಗನ್ ಕ್ರಿಸ್ಟಲ್ ಗ್ಲಾಸ್ 3 ರಕ್ಷಣೆ ಹೊಂದಿದೆ. ಹಾಗೆಯೇ ಈ ಹೊಸ ಮೊಬೈಲ್ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯ ಪಡೆದಿದೆ. ಅಲ್ಲದೇ 90W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,000mAh ಬ್ಯಾಟರಿ ಪಡೆದಿದೆ. ಹಾಗೆಯೇ 22.5W ನಲ್ಲಿ ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಹೊಂದಿದೆ. ಈ ಫೋನ್ ಹಿಂಬದಿಯಲ್ಲಿ ಮೂರು ಕ್ಯಾಮೆರಾ ಅನ್ನು ಹೊಂದಿದ್ದು ಅವುಗಳು ಕ್ರಮವಾಗಿ 200MP + 50MP + 50MP ಸೆನ್ಸಾರ್ ಒಳಗೊಂಡಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾ ಸಹ 50MP ಸೆನ್ಸಾರ್ ಹೊಂದಿದೆ.