ಶಿಯೋಮಿ ಬ್ರಾಂಡ್‌ನ ಹೈ ಎಂಡ್ ಸ್ಮಾರ್ಟ್‌ಫೋನ್ ಅನ್ನು ರಿಯಾಯಿತಿಯಲ್ಲಿ ಖರೀದಿ ಮಾಡುವ ಪ್ಲಾನ್ ಇದ್ದರೆ, ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದ ಸೂಕ್ತ ವೇದಿಕೆ ಎನಿಸಿದೆ. ಹೌದು, ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ Xiaomi 17 ಸ್ಮಾರ್ಟ್‌ಫೋನ್ ಆಕರ್ಷಕ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,330 mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಶಿಯೋಮಿ 17 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ Jio ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ
ಲಕ್ಸುರಿ ಲುಕ್ ಜೊತೆಗೆ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಶಿಯೋಮಿ 17 ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 1,19,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 89,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಆಲ್ಪೈನ್ ಪಿಂಕ್, ಕಪ್ಪು, ಐಸ್ ಬ್ಲೂ ಮತ್ತು ವೆಂಚರ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ಇತ್ತೀಚಿನ ಶಿಯೋಮಿ 17 ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.3 ಇಂಚಿನ 1.5K OLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ ಸ್ಕ್ರೀನ್ 3,500 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ 2,656×1,220 ಪಿಕ್ಸಲ್ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ ಈ ನೂತನ ಮೊಬೈಲ್ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯ ಪಡೆದಿದೆ.
ಶಿಯೋಮಿ 17 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಅವುಗಳು ಕ್ರಮವಾಗಿ 50MP + 50MP + 50MP ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ ಮುಂಭಾಗದಲ್ಲಿ ಸಹ 50MP ಕ್ಯಾಮೆರಾ ಸೆನ್ಸಾರ್ ಹೊಂದಿದೆ. ಇದಲ್ಲದೇ ಈ ಫೋನ್ 100W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,330 mAh ಬ್ಯಾಟರಿ ಪವರ್ ಹೊಂದಿದೆ.