ಭಾರತದಲ್ಲಿ Xiaomi 17 ಬಿಡುಗಡೆ! ಇದು ಟ್ರಿಪಲ್‌ 50MP ಕ್ಯಾಮೆರಾ ಒಳಗೊಂಡ ಫ್ಲ್ಯಾಗ್‌ಶಿಪ್‌ ಫೋನ್‌

HIGHLIGHTS

ಶಿಯೋಮಿ 17 ಮೊಬೈಲ್‌ ಮಾರ್ಚ್ 13 ರಿಂದ ಭಾರತದಲ್ಲಿ ಮಾರಾಟ ಪ್ರಾರಂಭಿಸಲಿದೆ

ನೂತನ ಶಿಯೋಮಿ 17 ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ

ಶಿಯೋಮಿ 17 ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌, ಬ್ಲೂ ಮತ್ತು ಗ್ರೀನ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ

ಜನಪ್ರಿಯ ಶಿಯೋಮಿ ಕಂಪನಿಯ ಬಹುನಿರೀಕ್ಷಿತ Xiaomi 17 ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 11 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಫ್ಲ್ಯಾಗ್‌ಶಿಪ್ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಮೊಬೈಲ್‌ Snapdragon 8 Elite Gen 5 SoC ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯವನ್ನು ಹೊಂದಿರುವ ಜೊತೆಗೆ ಈ ಮೊಬೈಲ್‌ 6,330mAh ಬ್ಯಾಕ್‌ಅಪ್‌ ಒದಗಿಸುವ ಬ್ಯಾಟರಿ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದು 50MP ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ದೈತ್ಯ ಮೊಬೈಲ್‌ ಬ್ಲ್ಯಾಕ್‌, ಬ್ಲೂ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಇನ್ನು ಶಿಯೋಮಿ 17 ಮೊಬೈಲ್‌ ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ನಾಳೆ Motorola Edge 70 Fusion ಮಾರಾಟ! ಇದು 7000mAh ಬ್ಯಾಟರಿ ಇರುವ ಫೋನ್‌

Xiaomi 17 ಮೊಬೈಲ್‌ ಬೆಲೆ ಮತ್ತು ಲಭ್ಯತೆ

ಶಿಯೋಮಿ ಸಂಸ್ಥೆಯ ನೂತನ ಶಿಯೋಮಿ 17 ಮೊಬೈಲ್‌ ದೇಶಿಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ 12GB + 256GB ಸ್ಟೋರೇಜ್ ಆವೃತ್ತಿಯ ಬೆಲೆ 89,999 ರೂಗಳು ಆಗಿದೆ. ಇದರ 12GB + 512GB ಸ್ಟೋರೇಜ್ ವೇರಿಯಂಟ್‌ ಬೆಲೆ 99,999 ರೂಗಳು ಆಗಿದೆ. ಈ ನೂತನ ಮೊಬೈಲ್‌ ಇದೇ ಮಾರ್ಚ್ 13 ರಿಂದ Xiaomi ಇಂಡಿಯಾ ವೆಬ್‌ಸೈಟ್, Amazon ಇ ಕಾಮರ್ಸ್‌ ಮತ್ತು ಆಯ್ದ ರಿಟೇಲ್‌ ಸ್ಟೋರ್‌ಗಳ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನ್ ಬ್ಲ್ಯಾಕ್‌, ಬ್ಲೂ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಶಿಯೋಮಿ 17 ಫೀಚರ್ಸ್‌ ಹೀಗಿವೆ

ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಿಯೋಮಿ 17 ಮೊಬೈಲ್ 6.3 ಇಂಚಿನ CrystalRes OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 2,656×1,220 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 3,500 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5 SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಆಧಾರಿತ Xiaomi HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಫೋನ್‌ AI ಬರವಣಿಗೆ, AI ಸ್ಪೀಚ್ ರೆಕಗ್ನಿಷನ್, AI ಸರ್ಚ್, AI ಡೈನಾಮಿಕ್ ವಾಲ್‌ಪೇಪರ್‌ಗಳು ಮತ್ತು Google Gemini ನಂತಹ ಆಯ್ಕೆಗಳನ್ನು ಒಳಗೊಂಡಿದೆ.

ಶಿಯೋಮಿ 17 ಮೊಬೈಲ್‌ ಹಿಂಬದಿಯಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,330mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 100W ವೈರ್ಡ್ ಹೈಪರ್‌ಚಾರ್ಜ್ ಮತ್ತು 50W ವೈರ್‌ಲೆಸ್ ಹೈಪರ್‌ಚಾರ್ಜ್‌ಗೆ ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಒಳಗೊಂಡಿದೆ. ಹಾಗೆಯೇ ಡಾಲ್ಬಿ ಅಟ್ಮಾಸ್ ಮತ್ತು ಹೈ-ರೆಸ್ ಆಡಿಯೊ ಬೆಂಬಲಿತ ಸ್ಟೀರಿಯೊ ಸ್ಪೀಕರ್‌ಗಳನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :