ಟ್ರೆಂಡ್‌ನಲ್ಲಿ ಇರುವ ಫ್ಲ್ಯಾಗ್‌ಶಿಪ್ ಮೊಬೈಲ್ ಖರೀದಿ ಮಾಡಲು ಯೋಚಿಸಿದ್ದಿರಾ? ಹಾಗಿದ್ರೆ ಅಮೆಜಾನ್ ಪ್ಲಾಟ್‌ಫಾರ್ಮ್‌ನತ್ತ ಗಮನಿಸಿ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಶಿಯೋಮಿ ಸಂಸ್ಥೆಯ XIAOMI 17 ಮೊಬೈಲ್ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಶಿಯೋಮಿ ಸಂಸ್ಥೆಯ ಈ ಮೊಬೈಲ್ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಶಿಯೋಮಿ 17 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : OnePlus Nord CE 6 ಬಿಡುಗಡೆಗೆ ದಿನಾಂಕ ಫಿಕ್ಸ್! 8,000mAh ಬ್ಯಾಟರಿ ಪಕ್ಕಾ
ದೈತ್ಯ ಶಿಯೋಮಿ 17 ಮೊಬೈಲ್ ಹೈ ಎಂಡ್ ಮಾದರಿಯ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್ 12GB + 512GB ಸ್ಟೋರೇಜ್ ವೇರಿಯಂಟ್ ಬೆಲೆ 1,19,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 89,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ ಆಲ್ಪೈನ್ ಪಿಂಕ್, ಕಪ್ಪು, ಐಸ್ ಬ್ಲೂ ಮತ್ತು ವೆಂಚರ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.
ಶಿಯೋಮಿ 17 ಮೊಬೈಲ್ ಸಂಸ್ಥೆಯ Snapdragon 8 Elite Gen 5 SoC ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು ಇದು ಮೈಕ್ರೋ-ಕರ್ವ್ಡ್ ಅಲ್ಯೂಮಿನಿಯಂ ಫ್ರೇಮ್ ರಚನೆ ಅನ್ನು ಪಡೆದುಕೊಂಡಿದೆ. ಈ ಫೋನ್ 6.3 ಇಂಚಿನ 1.5K OLED ಡಿಸ್‌ಪ್ಲೇ ಅನ್ನು ಪಡೆದಿದ್ದು, 3,500 nits ಬ್ರೈಟ್ನೆಸ್ ಜೊತೆಗೆ 120Hz ಪ್ರೊಮೋಷನ್ ಹೊಂದಿದೆ. ಇದು 512GB ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಇದು ಶಿಯೋಮಿ ಹೈಪರ್‌ಓಎಸ್ 3 ಬೆಂಬಲಿತ ಹೈಪರ್‌ಎಐ ಇಂಟೆಲಿಜೆನ್ಸ್ ಹೊಂದಿದೆ.
ಶಿಯೋಮಿ 17 ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಅವುಗಳು ಕ್ರಮವಾಗಿ 50MP + 50MP + 50MP ಸೆನ್ಸಾರ್ ಪಡೆದಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾ ಸಹ 50MP ಸೆನ್ಸಾರ್ ಹೊಂದಿದೆ. ಅಲ್ಲದೇ 100W ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,330mAh ಬ್ಯಾಟರಿ ಪವರ್ ಹೊಂದಿದೆ. ಈ ಫೋನ್ ನೀರು ಮತ್ತು ಧೂಳಿನ ರಕ್ಷಣೆಗಾಗಿ IP69 ರೇಟಿಂಗ್ ಸೌಲಭ್ಯ ಹೊಂದಿದೆ.