ದೈತ್ಯ Xiaomi 17 Ultra ಮೊಬೈಲ್‌ ಖರೀದಿಗೆ ಇದುವೇ ಸರಿಯಾದ ಸಮಯ! ಅತ್ಯುತ್ತಮ ಆಫರ್ ಲಭ್ಯ

HIGHLIGHTS

ಅಮೆಜಾನ್‌ನಲ್ಲಿ ಶಿಯೋಮಿ 17 ಅಲ್ಟ್ರಾ ಬೆಲೆಯಲ್ಲಿ ಭಾರೀ ಇಳಿಕೆ

ಶಿಯೋಮಿ 17 ಅಲ್ಟ್ರಾ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ

ಶಿಯೋಮಿ 17 ಅಲ್ಟ್ರಾ ಮೊಬೈಲ್‌ ಎರಡು ಆಕರ್ಷಕ ಕಲರ್‌ ಆಯ್ಕೆಗಳನ್ನು ಹೊಂದಿದೆ

ದೈತ್ಯ Xiaomi 17 Ultra ಮೊಬೈಲ್‌ ಖರೀದಿಗೆ ಇದುವೇ ಸರಿಯಾದ ಸಮಯ! ಅತ್ಯುತ್ತಮ ಆಫರ್ ಲಭ್ಯ

ದೈತ್ಯ Xiaomi 17 Ultra ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಲುಕ್‌ ಜೊತೆಗೆ ಆಕರ್ಷಕ ಫೀಚರ್ಸ್‌ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ತಾಣವು ಇದೀಗ ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಶಿಯೋಮಿ ಸಂಸ್ಥೆಯ ಈ ಮೊಬೈಲ್‌ Snapdragon 8 Elite Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಶಿಯೋಮಿ 17 ಅಲ್ಟ್ರಾ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕಡಿಮೆ ಬೆಲೆಯ Lava Bold N2 Lite ಮೊಬೈಲ್‌ ನಾಳೆಯಿಂದ ಖರೀದಿಗೆ ಲಭ್ಯ!

Xiaomi 17 Ultra ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ

ಶಿಯೋಮಿ ಕಂಪನಿಯ ಶಿಯೋಮಿ 17 ಅಲ್ಟ್ರಾ ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 16GB + 512GB ವೇರಿಯಂಟ್‌ ಬೆಲೆ 1,69,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 1,39,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್‌ ಎರಡು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲ್ಯಾಕ್‌ ಹಾಗೂ ವೈಟ್‌ ಕಲರ್‌ ಆಗಿವೆ. ಅಮೆಜಾನ್‌ನಲ್ಲಿ ಶಿಯೋಮಿ 17 ಅಲ್ಟ್ರಾ ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Xiaomi 17 Ultra

ಶಿಯೋಮಿ 17 ಅಲ್ಟ್ರಾ ಫೀಚರ್ಸ್‌ ಮಾಹಿತಿ

ಇತ್ತೀಚಿಗೆ ಲಾಂಚ್‌ ಆಗಿರುವ ಶಿಯೋಮಿ 17 ಅಲ್ಟ್ರಾ ಮೊಬೈಲ್ 6.9 ಇಂಚಿನ Xiaomi HyperRGB OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 1,200×2,608 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 3,500 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್‌ ಆಕ್ಟಾ ಕೋರ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಆಧಾರಿತ Xiaomi HyperOS 3 ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು ಇದು ಬಳಕೆದಾರರಿಗೆ ಒದ್ದೆಯಾದ ಬೆರಳುಗಳಿಂದ ಮೊಬೈಲ್‌ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 200MP ಟೆಲಿಫೋಟೋ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಲೆನ್ಸ್‌ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 90W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo