ಆಫರ್‌ನಲ್ಲಿ ದೈತ್ಯ Xiaomi 17 Ultra ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಅತ್ಯುತ್ತಮ ಸಮಯ!
ಅಮೆಜಾನ್‌ನಲ್ಲಿ ಶಿಯೋಮಿ 17 ಅಲ್ಟ್ರಾ ಫೋನ್‌ಗೆ ಸಖತ್ ಡಿಸ್ಕೌಂಟ್
ಶಿಯೋಮಿ 17 ಅಲ್ಟ್ರಾ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ
ಈ ಫೋನ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಅಮೆಜಾನ್ ತಾಣದಲ್ಲಿ ಶಿಯೋಮಿ ಕಂಪನಿಯ Xiaomi 17 Ultra ಸ್ಮಾರ್ಟ್‌ಫೋನ್ ಗಮನಾರ್ಹ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಶಿಯೋಮಿ 17 ಅಲ್ಟ್ರಾ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಫ್ಲಿಪ್‌ಕಾರ್ಟ್ ತಾಣದಲ್ಲಿ Oppo K14x 5G ಮೊಬೈಲ್ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯ!
Xiaomi 17 Ultra ಬೆಲೆಯಲ್ಲಿ ಸಖತ್ ಡಿಸ್ಕೌಂಟ್
ಫ್ಲ್ಯಾಗ್‌ಶಿಪ್ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಶಿಯೋಮಿ 17 ಅಲ್ಟ್ರಾ ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 16GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 1,69,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 1,39,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆ ಹೊಂದಿದೆ.

ಶಿಯೋಮಿ 17 ಅಲ್ಟ್ರಾ ಫೋನ್ ಫೀಚರ್ಸ್
ಶಿಯೋಮಿ 17 ಅಲ್ಟ್ರಾ ಮೊಬೈಲ್ 6.9 ಇಂಚಿನ Xiaomi HyperRGB OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,200×2,608 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 3,500 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಇದು ಆಂಡ್ರಾಯ್ಡ್ 16 ಆಧಾರಿತ Xiaomi HyperOS 3 ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು ಇದು ಬಳಕೆದಾರರಿಗೆ ಒದ್ದೆಯಾದ ಬೆರಳುಗಳಿಂದ ಮೊಬೈಲ್ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.
ಶಿಯೋಮಿ 17 ಅಲ್ಟ್ರಾ ಮೊಬೈಲ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 200MP ಟೆಲಿಫೋಟೋ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಲೆನ್ಸ್ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 90W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
